
ಬೆಂಗಳೂರು: ಅಚ್ಚರಿಯ ಬೆಳವಣಿಗೆಯಲ್ಲಿ ಅನುದಾನಿತ ಶಾಲೆಗಳಿಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶುಭ ಸುದ್ದಿಯನ್ನು ನೀಡಿದ್ದಾರೆ.
ಅನುದಾನಿತ ಶಿಕ್ಷಣ ಸಂಸ್ಥೆಗಳ ಬಹಳ ವರ್ಷಗಳ ಬೇಡಿಕೆಯೊಂದನ್ನು ರಾಜ್ಯ ಸರ್ಕಾರ ಈಡೇರಿಸಿದೆ ಎಂದು ಅವರು ಫೇಸ್ಬುಕ್ ಖಾತೆ ಮೂಲಕ ತಿಳಿಸಿದ್ದಾರೆ.
ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ನಿವೃತ್ತಿ, ನಿಧನ, ರಾಜೀನಾಮೆಯಂತಹ ಕಾರಣಗಳಿಗೆ ತೆರವಾದ ಹುದ್ದೆಗಳನ್ನು ತುಂಬಿಕೊಳ್ಳಲು ಸರ್ಕಾರದ ಅನುಮೋದನೆ ದೊರಕಿಸಿಕೊಡಲಾಗಿದೆ.
ಈ ಕುರಿತು ಆರ್ಥಿಕ ಇಲಾಖೆಯ ಅಧಿಕೃತ ಆದೇಶ ಪ್ರಕಟವಾಗಲಿದೆ ಎಂದಿರುವ ಅವರು, ಕರೊನಾದಂತಹ ಸಂಕಷ್ಟದ ಸಂದರ್ಭದಲ್ಲಿಯೂ ನನ್ನ ಕೋರಿಕೆಯನ್ನು ಮನ್ನಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ನಮ್ಮ ಶೈಕ್ಷಣಿಕ ಪ್ರಗತಿಗೆ ಪೂರಕವಾಗುವ ಈ ನಿರ್ಧಾರದ ಮೂಲಕ ಹಲವು ಸಂಘಟನೆಗಳ ಪ್ರಧಾನ ಬೇಡಿಕೆಯನ್ನು ಈಡೇರಿಸಿದಂತಾಗಿದೆ ಎಲ್ಲರಿಗೂ ಕೃತಜ್ಞತೆಗಳು ಎಂದವರು ಬರೆದುಕೊಂಡಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

