
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 79ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಸಚಿವರು, ಶಾಸಕರು, ಆಪ್ತರು, ಅಭಿಮಾನಿಗಳು ಹಾಗೂ ಕಾರ್ಯಕರ್ತರಿಂದ ಶುಭ ಹಾರೈಕೆಯ ಮಾಹಪೂರವೇ ಸಾಮಾಜಿಕ ಜಾಲತಾಣದಲ್ಲಿ ಹರಿದು ಬರುತ್ತಿದೆ.
ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕ ಸಿಎಂ ಅವರಿಗೆ ಶುಭಾಶಯಗಳು. ಯಡಿಯುರಪ್ಪಜಿ ನಮ್ಮ ಅತ್ಯಂತ ಅನುಭವಿ ನಾಯಕರಲ್ಲಿ ಒಬ್ಬರಾಗಿದ್ದು, ಅವರು ರೈತರ ಕಲ್ಯಾಣಕ್ಕಾಗಿ ಮತ್ತು ಬಡವರ ಸಬಲೀಕರಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಅವರ ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡುವ ಮೂಲಕವಾಗಿ ಶುಭಾಶಯಗಳನ್ನು ಕೋರಿದ್ದಾರೆ.
ಪ್ರತೀ ವರ್ಷದ ಹುಟ್ಟು ಹಬ್ಬದ ಸಮಯದಲ್ಲಿ ಸಂಜಯನಗರದ ರಾಧಾಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡುವ ಬಿಎಸ್‍ವೈ ಅವರು ಇಂದು ಸಹ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ರಾಧಾಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಅರ್ಚನೆ ಮಾಡಿಸಿದ್ದಾರೆ. ಮೊದಲು ವಿದ್ಯಾಗಣಪತಿಗೆ ಪೂಜೆ ಸಲ್ಲಿಸಿದ್ದಾರೆ. ಸಿಎಂಗೆ ಸಚಿವ ಬೈರತಿ ಬಸವರಾಜ್, ಬಿಡಿಎ ಅಧ್ಯಕ್ಷ ಎಸ್ ಆರ್ ವಿಶ್ವನಾಥ್, ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಜೊತೆ ನೀಡಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

