
ದೊಡ್ಡಬಳ್ಳಾಪುರ: ನಗರದ ಶ್ರೀ ದೇವರಾಜ್ ಅರಸ್ ಪದವಿ ಪೂರ್ವ ಕಾಲೇಜಿನಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಕೆ.ಲವ ಕುಮಾರ್ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
ಇಂದು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲವ ಕುಮಾರ್ ಅವರನ್ನು ಸನ್ಮಾನಿಸಿ, ಅವರ ಕಾರ್ಯವೈಖರಿಯನ್ನು ಸ್ಮರಿಸಿ, ನೆನೆಪಿನ ಕಾಣಿಕೆ ನೀಡಿ ಗೌರವಿಸಲಾಯಿತು.
ಇವರು ಕಾಲೇಜಿನಲ್ಲಿ 15 ವರ್ಷಗಳ ಕಾಲ ಜೀವಶಾಸ್ತ್ರದ ಉಪನ್ಯಾಸಕರಾಗಿ, ಐದು ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ.
ಸನ್ಮಾನ ಕಾರ್ಯಕ್ರಮದಲ್ಲಿ ಆರ.ಎಲ್.ಜಾಲಪ್ಪ ಸಮೂಹ ಸಂಸ್ಥೆಗ ನಿರ್ದೇಶಕ ಜೆ.ರಾಜೇಂದ್ರ, ಚಿಕ್ಕಬಳ್ಳಾಪುರ ಜಿಲ್ಲೆಯ ಉಪನಿರ್ದೇಶಕಿ ಗೀತ ಲವ್ ಕುಮಾರ್, ಪ್ರಾಂಶುಪಾಲರಾದ ಬಿ.ವಿ.ಶೋಭಾ, ಉಪನ್ಯಾಸಕರಾದ ಮಹಾಂತೇಶಪ್ಪ, ಜ್ಯೋತಿ, ದಾದಾಪೀರ್, ಆನಂದ, ಸಿಬ್ಬಂದಿಗಳಾದ ಮಂಜುನಾಥ್, ವೀರಭದ್ರಾಚಾರಿ, ವೆಂಕಟಾಚಲ, ಶಂಕ್ರಪ್ಪ, ವೆಂಕಟೇಶ್ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

