
ದೊಡ್ಡಬಳ್ಳಾಪುರ: ದೇವಾಂಗ ಸಮನ್ವಯ ಸಮಿತಿ ವತಿಯಿಂದ ಇಂದು ನಗರದ ದತ್ತಾತ್ರೇಯ ಕಲ್ಯಾಣ ಮಂದಿರದಲ್ಲಿ ದೇವಾಂಗ ಸಂಘಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಸಮಾವೇಶದಲ್ಲಿ ಹಂಪಿ ಹೇಮಕೂಟದ ಪೀಠಾಧ್ಯಕ್ಷ ದೇವಾಂಗ ಜಗದ್ಗುರು ಶ್ರೀ ದಯಾನಂದಪುರಿ ಸ್ವಾಮೀಜಿ, ರಾಜ್ಯಸಭಾ ಸದಸ್ಯ ಕೆ.ನಾರಾಯಣ, ಆಂಧ್ರದ ದೇವಾಂಗ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಬೀರಕ ಸುರೇಂದ್ರ, ರಾಜ್ಯ ದೇವಾಂಗ ಸಂಘದ ಅಧ್ಯಕ್ಷ ರಮೇಶ್ ಮೊದಲಾದವರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮ 10ಗಂಟೆಗೆ ಆರಂಭವಾಗಲಿದ್ದು, ದೇವಾಂಗ ಸಮುದಾಯ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಯಾಗಿಸಬೇಕೆಂದು ದೇವಾಂಗ ಮಂಡಳಿ ನಿರ್ದೇಶಕ ಹೆಚ್.ವಿ.ಅಖಿಲೇಶ್ ಮನವಿ ಮಾಡಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

