
ಬೆಂಗಳೂರು: ರಾಸಲೀಲೆ ಕುರಿತು ದೂರು ದಾಖಲಾಗಿರುವ ವಿಚಾರ ಹಾಗೂ ಇದಕ್ಕೆ ಸಂಬಂಧಿಸಿದಂತೆ ಬಿಡುಗಡೆಯಾಗಿರುವ ವಿಡಿಯೋ ಸಾಕಷ್ಟು ಸದ್ದು ಮಾಡಿದ ಹಿನ್ನೆಲೆಯಲ್ಲಿ, ರಾಜ್ಯ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ, ರಾಜೀನಾಮೆ ಪತ್ರ ರವಾನಿಸಿರುವ ಅವರು, ಪಂಚ ರಾಜ್ಯಗಳ ಚುನಾವಣೆಯೂ ಸಮೀಪಿಸುತ್ತಿರುವುದರಿಂದ ಪಕ್ಷಕ್ಕೆ ತೊಂದರೆಯಾಗಬಾರದೆಂದು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿರುವ ರಮೇಶ್ ಜಾರಕಿಹೊಳಿ, ಸಂಪುಟ ಸಭೆಗೂ ಮುನ್ನ ರಾಜೀನಾಮೆ ನೀಡಿದ್ದು ಆರೋಪಮುಕ್ತರಾಗಿ ಬಂದ ಬಳಿಕ ಸಚಿವ ಸ್ಥಾನ ನೀಡಿ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖ ಮಾಡಿರುವುದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿಗೆ ಕಾಯಲಾಗುತ್ತಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

