
ಬೆಂ.ಗ್ರಾ.ಜಿಲ್ಲೆ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್)ದ ಆಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ 30 ದಿನಗಳ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಧಾರಿತ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಮಾರ್ಚ್ ತಿಂಗಳ ಕೊನೆಯ ವಾರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ತರಬೇತಿಯಲ್ಲಿ ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯ ತರಬೇತಿ ಹಾಗೂ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ, ಯೋಜನಾ ವರದಿ ಹಾಗೂ ಉದ್ಯಮ ನಿರ್ವಹಣೆ ಕುರಿತು ತರಬೇತಿಯನ್ನು ನೀಡಲಾಗುವುದು.
ಅರ್ಜಿ ಸಲ್ಲಿಸಲು ಇಚ್ಛಿಸುವವರು, 18 ವರ್ಷದಿಂದ 40 ವóರ್ಷ ವಯಸ್ಸಿನವರಾಗಿರಬೇಕು ಹಾಗೂ ಎಸ್.ಎಸ್.ಎಲ್.ಸಿ. ಪಾಸಾಗಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು 2021 ಮಾರ್ಚ್ 12 ಕೊನೆಯ ದಿನವಾಗಿದೆ.
ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ, ‘ಸಿಡಾಕ್’, ಕೆಜಿಟಿಟಿಐ ಕಟ್ಟಡ, ಕೌಶಲ್ಯ ಭವನ ಆವರಣ, ಡೈರಿ ವೃತ್ತ, ಬನ್ನೇರ್‍ಘಟ್ಟ ರಸ್ತೆ, ಬೆಂಗಳೂರು. ದೂರವಾಣಿ ಸಂಖ್ಯೆ: 080-29568484 ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ: 132, ಜಿಲ್ಲಾಡಳಿತ ಭವನ, ಚಪ್ಪರದಕಲ್ಲು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿಡಾಕ್‍ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ..

