
ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಮಾರ್ಚ್ 05 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ “ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ”ವನ್ನು ಹಮ್ಮಿಕೊಳ್ಳಲಾಗಿದೆ.

ಶಿಬಿರದಲ್ಲಿ ಕೆ.ಸಿ.ಜನರಲ್ ರಕ್ತನಿಧಿ ಕೇಂದ್ರದ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿರಲಿದ್ದು, ಜಿಲ್ಲಾಡಳಿತದ ಸಿಬ್ಬಂದಿ ಹಾಗೂ ಸಾರ್ವಜನಿಕರು ಶಿಬಿರದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುಳಾದೇವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

