
ಬೆಂಗಳೂರು: ನಾಳೆ ಅಂದರೆ ಮಾರ್ಚ್ 5 ರ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ “ಕೃಷಿ ಇಲಾಖೆ ರಾಯಭಾರಿ” ಸ್ವೀಕಾರ ಕಾರ್ಯಕ್ರಮ ಆಯೋಜಿಸಿದ್ದು, ಕೃಷಿ ಸಚಿವ ಬಿ.ಸಿ.ಪಾಟೀಲ್ ಅಧ್ಯಕ್ಷತೆಯಲ್ಲಿ ನಟ ದರ್ಶನ್ ಅಧಿಕೃತವಾಗಿ ಕೃಷಿ ಇಲಾಖೆ ರಾಯಭಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ರೈತ ಪರ ಕಾಳಜಿಯನ್ನು ಮೆಚ್ಚಿ ಸ್ವಪ್ರೇರಿತರಾಗಿ ಕೃಷಿ ಇಲಾಖೆಯ ರಾಯಭಾರಿಯಾಗಲು ಚಾಲೆಂಜಿಂಗ್ ಸ್ಟಾರ್ ಮುಂದಾಗಿದ್ದು, ಈ ಸಂಬಂಧ ಈಗಾಗಲೇ ಸರ್ಕಾರ ಆದೇಶವನ್ನು ಹೊರಡಿಸಿದೆ.
ಚಿತ್ರನಟನೆಯ ಜೊತೆಗೆ ಸ್ವತಃ ಕೃಷಿಕರೂ ಆಗಿರುವ ದರ್ಶನ್ ಈ ಸಂಬಂಧ ಕೃಷಿ ಸಚಿವರ ಜೊತೆ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಬಿ.ಸಿ.ಪಾಟೀಲರ ರೈತೋಪಯೋಗಿ ಚಿಂತನೆಯ “ರೈತರಿಗೊಂದು ದಿನ” ಕಾರ್ಯಕ್ರಮದಲ್ಲಿ ಕೂಡ ಭಾಗವಹಿಸಲಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

