ಕೃಷಿ ಕಾಯಕದ ರಾಯಭಾರಿಯಾಗಿ ಅಧಿಕಾರ ಸ್ವೀಕರಿಸಿದ ನಟ ದರ್ಶನ್ / ಅಪರೂಪದ ಕಾರ್ಯಕ್ರಮವೆಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಚಲನಚಿತ್ರ ರಂಗದಲ್ಲಿ‌ ಎತ್ತರಕ್ಕೆ ಬೆಳೆದಿರುವ ದರ್ಶನ್ ನಟನೆಯ ಜೊತೆಗೆ, ಕೃಷಿಕ ರೈತಾಪಿ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಯಾವುದೇ ಸಂಭಾವನೆಯಿಲ್ಲದೇ ಕೃಷಿ ಇಲಾಖೆಯ ರಾಯಭಾರಿಯಾಗಿರುವುದು ಹೆಮ್ಮೆಯ ವಿಚಾರ‌. ರೈತರ ಪರವಾಗಿ ದರ್ಶನ್‌ಗೆ ಅಭಿನಂದನೆಗಳು. ಕೃಷಿ ಇಲಾಖೆಗೆ ಕೃಷಿ ರಂಗಕ್ಕೆ ದರ್ಶನ್ ಯಾವುದೇ ಸಂಭಾವನೆಯಿಲ್ಲದೇ ಕೃಷಿ ಇಲಾಖೆಯ ರಾಯಭಾರಿಯಾಗಿರುವುದು ಮೆಚ್ಚುಗೆಯ ಸಂಗತಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಹೇಳಿದರು.

“ಕೃಷಿ ಕಾಯಕದ ರಾಯಭಾರಿ” ಸ್ವೀಕಾರ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.

ನಾನು ಸಹ ದರ್ಶನ್ ಅವರ “ರಾಬರ್ಟ್” ಚಿತ್ರವನ್ನು ನೋಡುತ್ತೇನೆ ಎಂದರು.

ಕೃಷಿ ಸಚಿವ ಬಿ.ಸಿ.ಪಾಟೀಲ್,‌ಇದು ಕೃಷಿ ಇಲಾಖೆಯ ಅಭೂತಪೂರ್ವ ಕಾರ್ಯಕ್ರಮವಾಗಿದೆ. ಚಾಲೆಂಜಿಂಗ್ ಸ್ಟಾರ್ ಚಿತ್ರರಂಗದಲ್ಲಿ ನಟನೆಯ ಜೊತೆಗೆ ಕೃಷಿ ಪಶುಸಂಗೋಪನೆ ಚಟುವಟಿಕೆಗಳನ್ನೂ ನಡೆಸುತ್ತಿರುವ ದರ್ಶನ್ ಕೃಷಿ ಕಾಯಕದ ರಾಯಭಾರಿಯಾಗಿರುವುದು ಹೆಮ್ಮೆಯ ವಿಚಾರ. ರೈತ ನಾಯಕರಾಗಿ ರೈತಪರ ಹೋರಾಟ ಮಾಡಿ ರಾಜ್ಯದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಗಳಾಗಿರುವ ನಾಡಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲಿ ಈ ಕಾರ್ಯಕ್ರಮ ನಡೆಯುತ್ತಿರುವುದು ಬಹಳ ಸಂತಸದ ವಿಚಾರ‌. ದರ್ಶನ್ ಎತ್ತರವಿರುವಷ್ಟು ಅವರ ಹೃದಯವೂ ಅಷ್ಟೇ ವಿಶಾಲವಾಗಿದೆ. ದರ್ಶನ್‌ಗೆ ರೈತರ ಪರ ಕಳಕಳಿ ಇರುವುದು ಹೆಮ್ಮೆಯ ವಿಚಾರ‌.ದರ್ಶನ್ ಫಾರ್ಮ್ ಎನ್ನುವುದು ಸಣ್ಣ ಝೂ ಇದ್ದಂತಿದೆ. ದರ್ಶನ್ ಸ್ವತಃ ಕೃಷಿ ಚಟುವಟಿಕೆಯನ್ನೂ ಮಾಡುತ್ತಾರೆ.ದರ್ಶನ್ ಸ್ವತಃ ರೈತರೊಂದಿಗೊಂದು ದಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತೇನೆ ಎಂದಿರುವುದು ಖುಷಿಯ ವಿಚಾರ.ದೊಡ್ಡ ದೊಡ್ದ ಕೆಲ ಸೂಪರ್ ಸ್ಟಾರ್‌ಗಳು ಸಂಭಾವನೆ ಪಡೆದು ದೊಡ್ಡದೊಡ್ಡ ಕಂಪೆನಿ ಕಾರ್ಯಕ್ರಮಗಳಿಗೆ ರಾಯಭಾರಿಯಾಗುತ್ತಾರೆ. ಆದರೆ ದರ್ಶನ್ ಕೃಷಿ ಇಲಾಖೆಗೆ ಯಾವುದೇ ಸಂಭಾವನೆ ಪಡೆಯದೇ ರಾಯಭಾರಿಯಾಗಿರುವುದು ದರ್ಶನ್ ಅವರಲ್ಲಿರುವ ಕೃಷಿ ಉತ್ಸಾಹ ರೈತ ಪರ ಕಾಳಜಿಯನ್ನು ತೋರಿಸುತ್ತದೆ ಎಂದರು.

ದರ್ಶನ್ ನಟನೆಯ “ರಾಬರ್ಟ್” ಚಿತ್ರ ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ಸ್ವತಃ ಸ್ಫೂರ್ತಿಯಿಂದ ಅಭಿಮಾನಿಗಳು ಜನರು ಸೇರಿರುವುದು ನೋಡಿದರೆ ಅವರಿಗೆ ಜನರ ಅಭಿಮಾನ ಎಷ್ಟಿದೆ ಎಂದು ಎದ್ದು ತೋರಿಸುತ್ತದೆ. ಸಂಗೋಳ್ಳಿ ರಾಯಣ್ಣ ಪಾತ್ರಕ್ಕೂ ಸೈ, ಇತರೆ ಎಲ್ಲಾ ಪಾತ್ರಗಳೊ

ನಾನು ಅಧುನಿಕ ಕೌರವನಾಗಿ ನಟನೆ ಮಾಡಿದ್ದೆ. ಆದರೆ ಪೌರಾಣಿಕವಾಗಿ ನಟನೆಯಲ್ಲಿ ದರ್ಶನ್ ಕೌರವನಾಗಿ ನಟಿಸಿದ್ದಾರೆ. ಮಾರ್ಚ್ 11 ರಂದು “ರಾಬರ್ಟ್” ಚಿತ್ರ ರಿಲೀಸ್ ಆಗಲಿದ್ದು ಚಿತ್ರ ಸೂಪರ್ ಸೂಪರ್ ಹಿಟ್ ಆಗಲಿ ಎಂದು ಬಿ.ಸಿ.ಪಾಟೀಲ್ ಹಾರೈಸಿದರು.

ನಟ ದರ್ಶನ್ ಮಾತನಾಡಿ,

ಪೊಲೀಸ್ ಇಲಾಖೆಯಿಂದ ಸಿನಿಮಾರಂಗದಿಂದ ಈಗ ಬಿ.ಸಿ.ಪಾಟೀಲ್ ಕೃಷಿ ಸಚಿವರಾಗಿದ್ದಾರೆ.ನಾನು ಸರ್ಕಾರದ ಕೃಷಿ ಇಲಾಖೆಯ ಕಾರ್ಯಕ್ರಮಗಳನ್ನು ಪ್ರಚುರ ಪಡಿಸುತ್ತೇನೆ.ರೈತರಿಗೂ ಜನರಿಗೂ ಇರುವುದು ರಕ್ತ ಸಂಬಂಧ.ಇದಕ್ಕೆ ನಾನು ಶ್ರಮಿಸುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ” ಕೃಷಿ  ಕೈಪಿಡಿ-2021″ಯನ್ನು ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಇಲಾಖೆಯ ನಿರ್ದೇಶಕ ಶ್ರೀನಿವಾಸ್, ಮೇಲ್ಮನೆ ಸದಸ್ಯ ಸಂದೇಶ್ ನಾಗರಾಜ್, ಸೇರಿದಂತೆ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಜನರ ತೀರ್ಪನ್ನು ಅವಮಾನಿಸದೆ ವಿಜಯ್‌ಗೆ ಅವಕಾಶ ನೀಡಿ: ತಮಿಳುನಾಡು ರಾಜ್ಯಪಾಲರ ನಡೆಗೆ ಕಮಲ್ ಹಾಸನ್ ಗರಂ

ಜನರ ತೀರ್ಪನ್ನು ಅವಮಾನಿಸದೆ ವಿಜಯ್‌ಗೆ ಅವಕಾಶ ನೀಡಿ: ತಮಿಳುನಾಡು ರಾಜ್ಯಪಾಲರ ನಡೆಗೆ ಕಮಲ್

ತಮಿಳುನಾಡಿನಲ್ಲಿ ನೂತನ ಸರಕಾರ ರಚನೆಗೆ ವಿಜಯ್ (Vijay) ನೇತೃತ್ವದ ಟಿವಿಕೆ (TVK) ಭರದಿಂದ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರಾದ ರಾಜೇಂದ್ರ ಮಾಡಿ ಸರಕಾರ ಅರ್ಲೇಕರ್‌ರನ್ನು ಭೇಟಿ ರಚನೆಗೆ ವಿಜಯ್ ಹಕ್ಕು ಮಂಡಿಸಿದ್ದಾರೆ. ಆದರೆ

[ccc_my_favorite_select_button post_id="121857"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]