ದರ ಇಳಿಸುವ ನೆಪದಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು GSTಗೆ ಸೇರಿಸುವ ಹುನ್ನಾರ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ತೈಲ ದರ ಏರಿಕೆ ವಿರುದ್ಧ ಜನರ ಆಕ್ರೋಶವನ್ನೇ ಬಳಸಿಕೊಂಡು, ದರ ಇಳಿಸುವ ನೆಪದಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು GSTಗೆ ಸೇರಿಸುವ ಹುನ್ನಾರವನ್ನು ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ನಡೆಸುತ್ತಿದೆ. ಈ ಬಗೆಗಿನ ಚರ್ಚೆಗಳನ್ನು ಹುಟ್ಟುಹಾಕುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳೇನಾದರೂ GSTಗೆ ಒಳಪಟ್ಟರೆ ಅದು ರಾಜ್ಯಗಳ ಪಾಲಿಗೆ ಮರಣಶಾಸನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸೆಸ್‌ ರಾಜ್ಯಗಳ ಪ್ರಮುಖ ಆದಾಯದ ಮೂಲಗಳಲ್ಲೊಂದು. ಕೇಂದ್ರ ಸರ್ಕಾರ ಮಿತಿ ಮೀರಿದ ತೆರಿಗೆ ವಿಧಿಸುತ್ತದೆ ಮತ್ತು ರಾಜ್ಯಗಳಿಗಿಂತಲೂ ಅಧಿಕ ಆದಾಯವನ್ನು ಸಂಗ್ರಹಿಸುತ್ತದೆ. ಈಗ ಅದೂ ಸಾಲದು ಎಂಬಂತೆ ಪೆಟ್ರೋಲಿಯಂ ಅನ್ನು GSTಗೆ ತಂದು ರಾಜ್ಯಗಳು ಪಡೆಯುತ್ತಿರುವ ಆದಾಯವನ್ನೂ ಲಪಟಾಯಿಸುವ ತಂತ್ರವನ್ನು ಮಾಡಿದೆ.

ರಾಜ್ಯಗಳು GST ವ್ಯವಸ್ಥೆಗೆ ಒಪ್ಪಿಗೆ ನೀಡಿದ ನಂತರ ನೀಡಬೇಕಿದ್ದ ಪಾಲು, ಪರಿಹಾರವನ್ನು ಕೇಂದ್ರ ಈ ವರೆಗೆ ಸರಿಯಾಗಿ ಕೊಟ್ಟೇ ಇಲ್ಲ. ಸಾವಿರಾರು ಕೋಟಿ ಬಾಕಿಯನ್ನು ಇನ್ನೂ ಉಳಿಸಿಕೊಂಡಿದೆ. ಬಾಕಿಗಾಗಿ ರಾಜ್ಯಗಳು ಕೇಂದ್ರವನ್ನು ಬೇಡಾಡಿ ಬಸವಳಿದಿವೆ. ಈಗ ಪೆಟ್ರೋಲಿಯಂ ಆದಾಯವನ್ನು ಕೇಂದ್ರಕ್ಕೆ ಒಪ್ಪಿಸಿದರೆ ರಾಜ್ಯಗಳ ಪಾಡು ಶೋಚನೀಯವಾಗಲಿದೆ.

ರಾಜ್ಯಗಳು ಆದಾಯವಿಲ್ಲದೇ, ಅಭಿವೃದ್ಧಿ ಕಾರ್ಯಗಳಿಗೆ ಅನುದಾನವಿಲ್ಲದೇ ಸಂಕಷ್ಟ ಅನುಭವಿಸಬೇಕಾಗುತ್ತದೆ. ಕೊನೆಗೆ ಕೊರತೆ ಬಜೆಟ್‌ ಮಂಡಿಸಬೇಕಾಗುತ್ತದೆ. ಅಥವಾ, ಬಜೆಟ್‌ ಗಾತ್ರವನ್ನೇ ಇಳಿಸಬೇಕಾದ ಸಂದರ್ಭ ಬರಲಿದೆ. ಇದು ಅಭಿವೃದ್ಧಿ ವಿಚಾರದಲ್ಲಿ ಹಿಂದಕ್ಕೆ ಓಡಿದಂತೆ. ಪ್ರತಿಯೊಬ್ಬ ಪ್ರಜೆಯೂ ಇದರ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ.

ತೈಲ ಬೆಲೆ ಇಳಿಸುವ ಕಾಳಜಿ ಕೇಂದ್ರಕ್ಕೆ ಇದ್ದಲ್ಲಿ ತಾನು ವಿಧಿಸುತ್ತಿರುವ ತೆರಿಗೆಯನ್ನು ಈ ಕೂಡಲೇ ತಗ್ಗಿಸಲಿ. ನಂತರ ರಾಜ್ಯಗಳಿಗೂ ತೆರಿಗೆ ತಗ್ಗಿಸಲು ಹೇಳಲಿ. ಅದು ಬಿಟ್ಟು ರಾಜ್ಯಗಳ ಪಾಲಿನ ಹಣಕ್ಕೂ ಕೇಂದ್ರ ಸರ್ಕಾರ ಕೈ ಇಡಬಾರದು. ರಾಜ್ಯಗಳು ಚೆನ್ನಾಗಿದ್ದರೆ, ದೇಶವೂ ಚೆನ್ನಾಗಿರುತ್ತದೆ. ರಾಜ್ಯಗಳನ್ನು ಶೋಷಿಸಿ ದೇಶ ಕಟ್ಟಲಾಗುತ್ತದೆಯೇ?

ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದಕ್ಕೆ ಹಲವು ರಾಜ್ಯಗಳು ಈಗಾಗಲೇ ವಿರೋಧ ವ್ಯಕ್ತಪಡಿಸಿವೆ. ರಾಜ್ಯದ ಮುಖ್ಯಮಂತ್ರಿಗಳೂ ಈ ವಿಚಾರದಲ್ಲಿ ಆಕ್ಷೇಪಣಾ ಮನೋಭಾವ ತಳೆಯಬೇಕು. ರಾಜ್ಯದ ಪ್ರಮುಖ ನಾಯಕರೂ ಈ ವಿಚಾರವಾಗಿ ಈಗಿನಿಂದಲೇ ಪ್ರತಿರೋಧ ವ್ಯಕ್ತಪಡಿಸಬೇಕು. ಇಲ್ಲವಾದರೆ, ಜಿಎಸ್‌ಟಿ ಕುಣಿಕೆ  ನಮ್ಮನ್ನು ಕಾಡಲಿದೆ ಎಂದವರು ಆತಂಕ ವ್ಯಕ್ತಪಡಿಸಿದ್ದಾರೆ.(ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಜನರ ತೀರ್ಪನ್ನು ಅವಮಾನಿಸದೆ ವಿಜಯ್‌ಗೆ ಅವಕಾಶ ನೀಡಿ: ತಮಿಳುನಾಡು ರಾಜ್ಯಪಾಲರ ನಡೆಗೆ ಕಮಲ್ ಹಾಸನ್ ಗರಂ

ಜನರ ತೀರ್ಪನ್ನು ಅವಮಾನಿಸದೆ ವಿಜಯ್‌ಗೆ ಅವಕಾಶ ನೀಡಿ: ತಮಿಳುನಾಡು ರಾಜ್ಯಪಾಲರ ನಡೆಗೆ ಕಮಲ್

ತಮಿಳುನಾಡಿನಲ್ಲಿ ನೂತನ ಸರಕಾರ ರಚನೆಗೆ ವಿಜಯ್ (Vijay) ನೇತೃತ್ವದ ಟಿವಿಕೆ (TVK) ಭರದಿಂದ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರಾದ ರಾಜೇಂದ್ರ ಮಾಡಿ ಸರಕಾರ ಅರ್ಲೇಕರ್‌ರನ್ನು ಭೇಟಿ ರಚನೆಗೆ ವಿಜಯ್ ಹಕ್ಕು ಮಂಡಿಸಿದ್ದಾರೆ. ಆದರೆ

[ccc_my_favorite_select_button post_id="121857"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]