
ಬೆಂ.ಗ್ರಾ.ಜಿಲ್ಲೆ: ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ವಿಶೇಷವಾಗಿ ಆಚರಿಸುವ ಮೂಲಕ, ಜಿಲ್ಲೆಯ ಇತರ ಗ್ರಾಮಪಂಚಾಯಿತಿಗಳಿಗೆ ಮಾದರಿಯಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಹುತೇಕ ಗ್ರಾಮಪಂಚಾಯಿತಿಗಳಿಂದ ಸೋಮವಾರ ಆಚರಿಸಲಾದ ಮಹಿಳಾ ದಿನಾಚರಣೆ ಕಾರ್ಯಕ್ರಮ, ಕೇವಲ ಗ್ರಾಪಂ ಸದಸ್ಯರ ಕುಟುಂಬ ಹಾಗೂ ಅಧಿಕಾರಿಗಳಿಗೆ ಮಾತ್ರ ಸೀಮಿತವಾಗಿತ್ತು ಎಂಬ ಆರೋಪಕ್ಕೆ ಕಾರಣವಾಗಿದೆ. ಇದರ ಹೊರತಾಗಿಯೂ ಕಳಲುಘಟ್ಟ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳು ಮಾದರಿ ಮಹಿಳಾ ದಿನಾಚರಣೆ ಆಚರಿಸಿ ಜಿಲ್ಲೆಯಾಧ್ಯಂತ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಕಳಲುಘಟ್ಟ ಗ್ರಾಮದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ, ಗ್ರಾಪಂವತಿಯಿಂದ ಮಹಿಳೆಯರಿಗಾಗಿ ಕ್ರೀಡಾ ಸ್ಪರ್ಧೆಗಳ ಆಯೋಜನೆ, ರೀಚ್ ಔಟ್ ಸಂಸ್ಥೆ ವತಿಯಿಂದ ಸ್ವಚ್ಛತೆಯ ಬಗ್ಗೆ ಶಿಬಿರ, 80 ಜನ ಮಹಿಳೆಯರಿಗೆ ಸ್ವಚ್ಛತಾ ಕಿಟ್ ವಿತರಣೆ, ಎಂಎಸ್ಸಿ ಪ್ರಾಣಿಶಾಸ್ತ್ರ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ, ಎರಡು ಚಿನ್ನದ ಚಿನ್ನದ ಪದಕಗಳನ್ನು ಪಡೆದ ಕಳಲುಘಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಿದಲೂರು ಗ್ರಾಮದ ವಿದ್ಯಾರ್ಥಿನಿ ಬಿ.ಎಸ್.ಪವಿತ್ರ ಸನ್ಮಾನಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ನೇತ್ರಾವತಿ ಅವರು ವಹಿಸಿದ್ದರೆ, ಕಾರ್ಯಕ್ರಮವನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀನಾರಾಯಣ ಉದ್ಘಾಟಿಸಿದ್ದಾರೆ.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಜಿ.ಆರ್. ಲೋಕೇಶ್ , ರೀಚ್ ಔಟ್ ಸಂಸ್ಥೆಯ ಮಾನಸ ರಾವ್, ಗ್ರಾಪಂ ಪಿಡಿಓ ಸಿ.ಗೀತಾಮಣಿ, ಕಾರ್ಯದರ್ಶಿ, ಸಿಬ್ಬಂದಿ, ಸ್ವ ಸಹಾಯ ಸಂಘದ ಸದಸ್ಯರುಗಳು, ಗ್ರಾಪಂ ಸದಸ್ಯರು ,ಗ್ರಾಮದ ಮಹಿಳೆಯರು ಭಾಗವಹಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

