
ಬೆಂಗಳೂರು: ಹುಲಿಕುಂಟೆ ವ್ಯಾಪ್ತಿಯಲ್ಲಿನ ಕೃಷಿ ಭೂಮಿಯನ್ನು ಕೆಐಎಡಿಬಿ ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡಬೇಕೆಂದು ಒತ್ತಾಯಿಸಿ ಹುಲಿಕುಂಟೆ ಗ್ರಾಮಸ್ಥರು ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ಕೆಐಎಡಿಬಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎನ್.ಶಿವಶಂಕರ್ ಅವರಿಗೆ 10 ಕಾರಣಗಳುಳ್ಳ ಆಕ್ಷೇಪಣೆ ಪತ್ರವನ್ನು ಸಲ್ಲಿಸಿದರು.

ಈ ವೇಳೆ ಮಾತನಾಡಿದ ಶಾಸಕ ಟಿ.ವೆಂಕಟರಮಣಯ್ಯ, ರೈತರ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿರುವುದು ಖಂಡನೀಯ. ಕೃಷಿ ಭೂಮಿ ವಶಪಡಿಸಿಕೊಳ್ಳಲು ಮುಂದಾಗಿರುವ ಕೆಎಡಿಬಿ ಇಲಾಖೆಯ ಅಧಿಕಾರಿಗಳು ಸ್ಥಳೀಯ ಸ್ಥಿತಿಗತಿಯನ್ನು ಪರಿಗಣಿಸದೆ, ಏಕಾಏಕಿ ಸರ್ಕಾರಕ್ಕೆ ವರದಿ ನೀಡಿದ್ದಾರೆ.
ಹುಲಿಕುಂಟೆ ಸುತ್ತಮುತ್ತಲ ಗ್ರಾಮಗಳ ಭೂಮಿ ಕೃಷಿಗೆ ಫಲವತ್ತಾದ ಭೂಮಿಯಾಗಿದ್ದು, ರೈತರು ಕೃಷಿಯಲ್ಲಿ ತೊಡಗಿ ಆರ್ಥಿಕ ಸಬಲರಾಗುತ್ತಿದ್ದಾರೆ. ಇಂತಹ ಭೂಮಿಯನ್ನು ಸ್ವಾಧಿನ ಪಡಿಸಿಕೊಂಡಲ್ಲಿ, ಇಲ್ಲಿನ ಜನ ಬೀದಿ ಪಾಲಾಗಲಿರುವುದರಿಂದ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಮನವಿ ಮಾಡಿದರು.
ಮುಖಂಡರಾದ ಸೋಮಣ್ಣ, ವಿಶ್ವನಾಥ್, ಗೋಪಿನಾಥ್, ಕೀರ್ತಿ, ವಿವೇಕ್ ಕುಮಾರ್, ರಘು ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

