
ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ವಿ.ಪ್ರಸಾದ್ ಅಧ್ಯಕ್ಷತೆಯಲ್ಲಿ “ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಸರ್ವ ಸದಸ್ಯರ ಸಾಮಾನ್ಯ ಸಭೆ”ಯು ಮಾರ್ಚ್ 19 ರಂದು ಬೆಳಿಗ್ಗೆ 10.00 ಗಂಟೆಗೆ ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿಯ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿದೆ.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ರೂಪ ಮರಿಯಪ್ಪ, ಸ್ಥಾಯಿ ಸಮಿತಿಗಳ ಅಧ್ಯಕ್ಷರುಗಳು, ಸದಸ್ಯರುಗಳು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರುಗಳು, ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

