
ದೊಡ್ಡಬಳ್ಳಾಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಇಂದು ಪೋಷಣ್ ಅಭಿಯಾನ ಯೋಜನೆ ಅಂಗವಾಗಿ ನಗರದ ಪ್ರಮುಖ ವೃತ್ತಗಳಲ್ಲಿ ಬೀದಿ ನಾಟಕದ ಮೂಲಕ ಜನಜಾಗೃತಿ ಮೂಡಿಸಲಾಯಿತು.

ಬೀದಿ ನಾಟಕದ ಮೂಲಕ ಪೋಷಣ್ ಅಭಿಯಾನ ಯೋಜನೆಯಡಿ ಪೌಷ್ಟಿಕತೆ ಮತ್ತು ಆರೋಗ್ಯ ಉತ್ತಮಪಡಿಸುವುದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸೇವೆಗಳು ಸೇರಿದಂತೆ ರಕ್ತಹೀನತೆ ತಡೆಗಟ್ಟುವುದು, ಶೀಘ್ರ ಎದೆ ಹಾಲು ಉಣಿಸುವಿಕೆ, ಆರು ತಿಂಗಳವರೆಗೆ ಕೇವಲ ಎದೆ ಹಾಲು ಉಣಿಸುವುದು, ಆರು ತಿಂಗಳ ನಂತರ ಪೂರಕ ಪೌಷ್ಟಿಕ ಆಹಾರ, ಎರಡು ವರ್ಷಗಳವರೆಗೆ ಎದೆ ಹಾಲು ಉಣಿಸುವುದು ಮುಂದುವರೆಸುವುದು, ಸಂಪೂರ್ಣ ಲಸಿಕಾ ಕಾರ್ಯಕ್ರಮಗಳು ಸೇರಿದಂತೆ ದಿನ ನಿತ್ಯದ ಸ್ವಚ್ಚತೆ ಹಾಗೂ ಅಂಗನವಾಡಿಗಳಲ್ಲಿನ ಸೇವೆಗಳ ವಿಷಯಗಳ ಕುರಿತು ಜಾಗೃತಿ ಮೂಡಿಸಲಾಯಿತು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

