ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಬಾಲ ಕಾರ್ಮಿಕರ ರಕ್ಷಣೆಗೆ ಸಹಕರಿಸಿ: ಸುಬ್ಬಾರಾವ್

ಬೆಂ.ಗ್ರಾ.ಜಿಲ್ಲೆ: ಸಾರ್ವಜನಿಕ ಸ್ಥಳಗಳಲ್ಲಿ, ಹೋಟೆಲ್‌ಗಳಲ್ಲಿ, ಬೇಕರಿಗಳಲ್ಲಿ, ಗ್ಯಾರೇಜ್‌ಗಳಲ್ಲಿ ಹಾಗೂ ಇನ್ನಿತರ ಸ್ಥಳಗಳಲ್ಲಿ ಬಾಲಕಾರ್ಮಿಕರನ್ನು ನೇಮಿಸಿ ಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಕರೆ ಮಾಡುವುದರ ಮೂಲಕ ಮಕ್ಕಳನ್ನು ರಕ್ಷಣೆ ಮಾಡಲು ಸಾರ್ವಜನಿಕರು ಸಹಕಾರ ನೀಡಬೇಕೆಂದು ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಸುಬ್ಬರಾವ್.ಎಸ್ ಅವರು ತಿಳಿಸಿದರು.

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಮಕ್ಕಳ ಸಹಾಯವಾಣಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವನಾಥಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ “ಬಾಲ ಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ ಪದ್ಧತಿಗಳ ಕುರಿತ ಉಚಿತ ಕಾನೂನು ಅರಿವು- ನೆರವು ಕಾರ್ಯಕ್ರಮ”ದಲ್ಲಿ ಅವರು ಮಾತನಾಡಿದರು.

 ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ಪ್ರಕಾರ 14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 15 ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಸಂಬಂಧಪಟ್ಟ ಮಾಲೀಕರಿಗೆ ಕನಿಷ್ಠ ಆರು ತಿಂಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ ಎರಡು ವರ್ಷದವರೆಗೂ ಜೈಲು ಶಿಕ್ಷೆ, ರೂ. 20,000/- ಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ರೂ. 50,000/- ಸಾವಿರ ಗಳವರೆಗೂ  ದಂಡ ಅಥವಾ ಎರಡನ್ನೂ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆಯೆಂದು ತಿಳಿಸಿದರು.

 ದೇವನಹಳ್ಳಿ ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರದ ವಕೀಲರಾದ ಮುನಿಯಪ್ಪ ಅವರು ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ಕಾರ್ಯಕ್ರಮದಲ್ಲಿ ಮಾಹಿತಿಯನ್ನು ನೀಡಿದರು.

‌‌ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಅನಿತಾಲಕ್ಷ್ಮಿ ಮಾತನಾಡಿ ಕರ್ನಾಟಕದಲ್ಲಿ ಆಪ್ತಸಮಾಲೋಚನೆ ಅಗತ್ಯವಿರುವ ಎಲ್ಲಾ ಮಕ್ಕಳಿಗಾಗಿ ಉಚಿತ ಟೆಲಿ- ಕೌನ್ಸಿಲಿಂಗ್ ಸೌಲಭ್ಯವನ್ನು ನೀಡಲು ಟೋಲ್ ಫ್ರೀ ನಂಬರ್ 14499 ಸ್ಥಾಪಿಸಲಾಗಿದ್ದು, ಆಪ್ತ ಸಮಾಲೋಚನೆ ಅವಶ್ಯಕತೆ ಇರುವ ಕರ್ನಾಟಕದ ಎಲ್ಲ ಮಕ್ಕಳು ಹಾಗೂ ಮಕ್ಕಳ ಪೋಷಕರು 14499 ಸಂಖ್ಯೆಗೆ ಕರೆ ಮಾಡುವ ಮೂಲಕ ಉಚಿತವಾಗಿ ಆಪ್ತಸಮಾಲೋಚನೆ ಸೌಲಭ್ಯ ಪಡೆಯಬಹುದೆಂದು ತಿಳಿಸಿದರು.

 ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಶ್ರೀಧರ್, ತಾಲ್ಲೂಕು ಆರೋಗ್ಯ ಇಲಾಖೆಯ ಸಿಬ್ಬಂದಿ ವೆಂಕಟೇಶ್, ಭವ್ಯ, ಶೈಲಜಾ, ಮಹಿಳಾ ಶಕ್ತಿಕೇಂದ್ರದ ಜಿಲ್ಲಾ ಸಂಯೋಜಕಿ ಸೌಮ್ಯ, ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕರಾದ ನಂದಿನಿ, ರಮೇಶ್, ಸುವರ್ಣಗೌರಿ, ಮಕ್ಕಳ ಸಹಾಯವಾಣಿ ಕೇಂದ್ರದ ಮುರಳಿ ಮತ್ತು ಮಂಜುನಾಥ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಪ್ರೋಗ್ರಾಮ್ ಮ್ಯಾನೇಜರ್ ಕರಿಯಪ್ಪ, ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರದ ಸಿಬ್ಬಂದಿ ಮೂರ್ತಿ ಮತ್ತು ಹರ್ಷಿತ್ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

TVK ವಿಜಯ್ ಸರಕಾರ ರಚನೆ ಹಕ್ಕು ತಡೆಯುವ ರಾಜ್ಯಪಾಲರ ನಡೆ ಸರಿಯಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

TVK ವಿಜಯ್ ಸರಕಾರ ರಚನೆ ಹಕ್ಕು ತಡೆಯುವ ರಾಜ್ಯಪಾಲರ ನಡೆ ಸರಿಯಲ್ಲ: ಡಿಸಿಎಂ

"TVK ವಿಜಯ್ ಅವರಿಗೆ ಸರ್ಕಾರ ರಚನೆ ಮಾಡಿ ಬಹುಮತ ಸಾಬೀತುಪಡಿಸುವುದನ್ನು ತಡೆಯಲು ತಮಿಳುನಾಡಿನ ರಾಜ್ಯಪಾಲರಿಗೆ ಯಾವುದೇ ರೀತಿಯ ಅಧಿಕಾರವಿಲ್ಲ. ರಾಜ್ಯಪಾಲರ ನಡೆ ಸರಿಯಲ್ಲ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಹೇಳಿದರು.

[ccc_my_favorite_select_button post_id="121880"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]