
ದೊಡ್ಡಬಳ್ಳಾಪುರ: ಕೃಷಿ ಇಲಾಖೆಯಲ್ಲಿ 2020-21ನೇ ಸಾಲಿನ ಕೃಷಿ ಯಾಂತ್ರೀಕರಣ ಯೋಜನೆಯಡಿಯಲ್ಲಿ ಸಾಮಾನ್ಯ ವರ್ಗದ ರೈತರಿಗೆ ಸಹಾಯಧನದಲ್ಲಿ ಕೃಷಿ ಉಪಕರಣಗಳು ಲಭ್ಯವಿದ್ದು, ಅರ್ಜಿ ಸಲ್ಲಿಸಲು ಮಾ.18 ಕೊನೆಯ ದಿನವಾಗಿದೆ.

ಈ ಯೋಜನೆಯಡಿಯಲ್ಲಿ ಮಿನಿ ಟ್ರಾಕ್ಟರ್, ಪವರ್ ಟಿಲ್ಲರ್, ಪವರ್ ವೀಡರ್, ರೋಟೋವೇಟರ್, ಡಿಸ್ಕ್ ಚಾಫ್ ಕಟರ್, ಕಲ್ಟಿವೇಟರ್ ಹಾಗೂ ಬಹುಬೆಳೆ ಒಕ್ಕಣೆ ಯಂತ್ರಗಳಿಗೆ ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಆಸ್ತಕ್ತಿ ಇರುವ ತಾಲೂಕಿನ ರೈತರು ಮಾ.18ರ ಒಳಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಸೌಲಭ್ಯ ಪಡೆದುಕೊಳ್ಳಬೇಕೆಂದು ಸಹಾಯಕ ಕೃಷಿನಿರ್ದೇಶಕಿ ಎನ್.ಸುಶೀಲಮ್ಮ ಮನವಿ ಮಾಡಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

