
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದ ಬಿಂದು ಪ್ರೌಢಶಾಲಾ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ, ಇತ್ತೀಚೆಗೆ ನಿವೃತ್ತರಾದ ಹೆಚ್.ವಿ.ರಾಜಣ್ಣನವರನ್ನು ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಸನ್ಮಾನಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಪ್ರೌಢಶಾಲಾ ಶಿಕ್ಷಕರ ಕಾರ್ಯಕ್ರಮದಲ್ಲಿ ಅವರು ಸನ್ಮಾನಿಸಿದರು.
ಈ ವೇಳೆ ಖಾಸಗಿ ಶಾಲೆಗಳ ಒಕ್ಕೂಟದ ತಾಲೂಕು ಅಧ್ಯಕ್ಷ ಸುಬ್ರಮಣ್ಯ, ರಾಜ್ಯ ಪರಿಷತ್ ಸದಸ್ಯ ಪಿ.ಕೆ.ಪ್ರಕಾಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಎಸ್.ವಿ.ವಸಂತಗೌಡ, ಸರ್ಕಾರಿ ನೌಕರರ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿ ಎಂ.ಎಸ್.ರಾಜಶೇಖರ್, ಇಸಿಒ ಶಿವಕುಮಾರ್, ಶಿಕ್ಷಕರಾದ ಚಿಕ್ಕೆಗೌಡ, ಶಿವಕುಮಾರ್, ಮಂಜುನಾಥ ಜುಟ್ಟಯ್ಯ, ದೇವರಾಜ್ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

