
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿರುವ ಅಶ್ಲೀಲ ಸಿಡಿ ಸ್ಪೋಟದ ಪ್ರಕರಣ, ಎಸ್ ಐಟಿ ತನಿಖೆ ನಡುವೆಯೇ, ಸಿಡಿಯಲ್ಲಿ ಇದ್ದರೆನ್ನಲಾಗುತ್ತಿರುವ ಸಂತ್ರಸ್ತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ವಿಡಿಯೋದಲ್ಲಿ ಮಾತನಾಡಿರುವ ಅವರು, ನನಗೆ ಯಾವುದೇ ರಾಜಕೀಯ ನಾಯಕರ ಬೆಂಬಲವಿಲ್ಲ. ಈ ವಿಡಿಯೋದಿಂದಾಗಿ ನನ್ನ ಮಾನ ಹರಾಜಾಗಿದೆ. ನನ್ನ ತಂದೆ, ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾನೂ ಕೂಡ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದೇನೆ.
ನನ್ನ ಮನೆ ಬಳಿ ಬಂದು ಜನರು ಕೇಳಿಕೊಂಡು ಹೋಗುತ್ತಿದ್ದಾರೆ. ನನಗೆ ಕೆಲಸ ಕೊಡಿಸುವುದಾಗಿ ರಮೇಶ್ ಜಾರಕಿಹೊಳಿ ಹೇಳಿದ್ದರು. ಅದೆಲ್ಲ ಮಾಡಿ ಈಗ ವಿಡಿಯೋಗಳನ್ನ ಹರಿ ಬಿಡುತ್ತಿದ್ದಾರೆ. ವಿಡಿಯೋ ಹೇಗೆ ಮಾಡಿದ್ದಾರೆಂದು ನನಗೆ ಗೊತ್ತಿಲ್ಲ ಎಂದು ಸಂತ್ರಸ್ತೆ ಹೇಳಿದ್ದಾರೆ.
ಇದೇ ವೇಳೆ ಬಸವರಾಜ ಬೊಮ್ಮಾಯಿ ಅವರು ರಕ್ಷಣೆ ನೀಡುವಂತೆ ಯುವತಿ ಮನವಿ ಮಾಡಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

