
ಬೆಂ.ಗ್ರಾ.ಜಿಲ್ಲೆ: ಕರೊನಾ ಲಸಿಕೆ ಅಭಿಯಾನದ ನಡುವೆಯೂ ಎರಡನೇ ಹಂತದ ಕರೊನಾ ಆತಂಕ ರಾಜ್ಯವನ್ನು ಕಾಡುತ್ತಿದೆ.

ಇದರ ಬೆನ್ನಲ್ಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರೊನಾ ಸೋಂಕಿತರ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.
ಶನಿವಾರ ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಕರೊನಾ ಬುಲೆಟಿನ್ ಮಾಹಿತಿಯಂತೆ, ಜಿಲ್ಲೆಯ 13 ಮಂದಿಗೆ ಸೋಂಕು ದೃಢಪಟ್ಟಿದೆ.
ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಾಲ್ಕು ಮಂದಿ ಪುರುಷರು, ನೆಲಮಂಗಲದಲ್ಲಿ ಓರ್ವ ಮಹಿಳೆ ಹಾಗೂ ಓರ್ವ ಪುರುಷ, ಹೊಸಕೋಟೆ ಇಬ್ಬರು ಪುರುಷರು ಹಾಗೂ ದೇವನಹಳ್ಳಿಯಲ್ಲಿ ಐದು ಮಂದಿ ಪುರುಷರಿಗೆ ಸೋಂಕು ದೃಢಪಟ್ಟಿದೆ. ಪ್ರಸ್ತುತ ಜಿಲ್ಲೆಯಲ್ಲಿ 51ಮಂದಿಗೆ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 97ಕ್ಕೆ ಏರಿಕೆಯಾಗಿದ್ದರೆ, 4 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ಆರೋಗ್ಯ ಇಲಾಖೆಯಿಂದ ನಿರಂತರವಾಗಿ ತಪಾಸಣೆ ನಡೆಸಲಾಗುತ್ತಿದ್ದು, 609 ಮಂದಿಯ ಫಲಿತಾಂಶ ಬರಬೇಕಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

