
ಚಿಕ್ಕಬಳ್ಳಾಪುರ: ಜಿಲ್ಲಾಧಿಕಾರಿ ಆರ್.ಲತಾ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದ ಆನ್ಲೈನ್ ಖದೀಮರು, ಫೇಸ್ಬುಕ್ ಪರಿಚಿತರಿಗೆ ಮೆಸೆಂಜರ್ ಮೂಲಕ ಸಂದೇಶ ಕಳುಹಿಸಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿಸಿಕೊಳ್ಳವ ಪ್ರಯತ್ನ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ನೈಜ ಖಾತೆಯಲ್ಲಿನ ಪೋಟೋಗಳನ್ನು, ಪ್ರೊಫೈಲ್ ಫೋಟೊ ಆಗಿ ಬಳಸಿರುವ ಖದೀಮರು ಮತ್ತೊಂದು ಖಾತೆ ಸೃಷ್ಟಿಸಿದ್ದಾರೆ. ಅವರೊಂದಿಗೆ ಇರುವ ಸ್ನೇಹಿತರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಫ್ರೆಂಡ್ ಆಗಿದ್ದಾರೆ. ನಂತರ ಅನುಮಾನ ಬಾರದಂತೆ ಎಫ್ಬಿ ಮೆಸೆಂಜರ್ ಮೂಲಕ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.
ಈ ಕುರಿತು ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿಗಳಾದ ಆರ್ ಲತಾ ಅವರು, ಡಿಸಿ ಚಿಕ್ಕಬಳ್ಳಾಪುರ (DC Chikkaballpur ) ಎಂಬ ಹೆಸರಿನಿಂದ ನಕಲಿ ಫೇಸ್ಬುಕ್ ಖಾತೆಯನ್ನು ತೆರೆಯಲಾಗಿದ್ದು, ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ, ನಂತರ ಹಣ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ಈ ಬಗ್ಗೆ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿದೆ.
ಸಾರ್ವಜನಿಕರು ಯಾವುದೇ ಕಾರಣಕ್ಕೂ ಸದರಿ ಹೆಸರಿನಿಂದ ಬರುವ ಫ್ರೆಂಡ್ ರಿಕ್ವೆಸ್ಟ್ ಅಕ್ಸೆಪ್ಟ್ ಮಾಡಬಾರದು ಹಾಗೂ ಹಣ ವರ್ಗಾವಣೆ ಮಾಡದಂತೆ ಅವರು ಮನವಿ ಮಾಡಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

