
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿಯಾಗದಿರಲು ಜನರು ಕಟ್ಟು ನಿಟ್ಟಿನ ಕರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಸಿಎಂ ಯಡಿಯೂರಪ್ಪ ತಜ್ಞರ ಜೊತೆ ಸಭೆ ನಡೆಸಿದರು.
ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಪಾಸಿಟಿವ್ ಕೇಸ್ ಹೆಚ್ಚಳವಾಗಿದ್ದು ಮರಣ ಪ್ರಮಾಣ ಕಡಿಮೆಯಾಗಿದೆ. ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ನಗರದಲ್ಲಿ ಪಾಸಿಟಿವ್ ಕೇಸ್ ಹೆಚ್ಚಳವಾಗಿದ್ದು ಇದು ಕರೊನಾ 2ನೇ ಅಲೆಯ ಮುನ್ಸೂಚನೆ ಎಂದು ತಜ್ಞರು ಹೇಳಿದ್ದಾರೆ. ಹೀಗಾಗಿ ಲಸಿಕೆ ಪ್ರಮಾಣ ಹೆಚ್ಚಿಸಬೇಕೆಂದು ಅವರು ಸಲಹೆ ನೀಡಿದ್ದಾರೆ ಎಂದರು.
ಅಪಾರ್ಟ್ಮೆಂಟ್ಗಳಲ್ಲಿ ಲಸಿಕೆ ಹಾಕುವುದನ್ನು ಹೆಚ್ಚಿಸುವುದು, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮತದಾರ ಪಟ್ಟಿ ಆಧರಿಸಿ, ಹಿರಿಯ ನಾಗರಿಕರನ್ನು ಗುರುತಿಸಿ ಲಸಿಕೆ ಹಾಕಿಸಬೇಕು ಎಂದರು.
ಮಾಸ್ಕ್ ಧಾರಣೆ ಕಡ್ಡಾಯ ಮಾಡಲಾಗಿದ್ದು, ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಪಾಡಬೇಕು. ಇದನ್ನು ಉಲ್ಲಂಘಿಸಿದರೆ ದಂಡ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ. ಮದುವೆ, ಸಮಾರಂಭ, ಧಾರ್ಮಿಕ ಸಮಾರಂಭ 500 ಜನಕ್ಕೆ ಸೀಮಿತ ಮಾಡಿದ್ದು ಜನರು ಸಹಕಾರ ನೀಡಬೇಕು ಎಂದು ಮನವಿ ಮಾಡಿದ ಅವರು, ಪ್ರಸ್ತುತ ಒಂದು ವಾರ ರಾಜ್ಯದಲ್ಲಿ ಲಾಕ್ಡೌನ್ ಇಲ್ಲ, ಸೀಲ್ಡೌನ್ ಇರುವುದಿಲ್ಲ ಅಲ್ಲದೆ ನಿಯಮ ಪಾಲನೆ ಕಡ್ಡಾಯ ಆದರೆ ಮುಂದಿನ ದಿನಗಳು ಸಾರ್ವಜನಿಕರ ಸ್ಪಂದನೆ ನಂತರ ಲಾಕ್ಡೌನ್ ಇಲ್ಲ, ಸೀಲ್ಡೌನ್ ಕುರಿತು ಚಿಂತಿಸುತ್ತೇವೆ ಎಂದಿದ್ದಾರೆ.
ಈ ವೇಳೆ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

