
ಬೆಂಗಳೂರು: ಜವಾಹರ ನವೋದಯ ವಿದ್ಯಾಲಯದ 6ನೇ ತರಗತಿ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು, ಬೆಂಗಳೂರು ಗ್ರಾಮಾಂತರ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಆರ್.ಚಕ್ರವರ್ತಿ ಹರಿತಲೇಖನಿಗೆ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, 2021ನೇ ಸಾಲಿನ ಜವಾಹರ ನವೋದಯ ವಿದ್ಯಾಲಯದ 6ನೇ ತರಗತಿ ಪ್ರವೇಶ ಪರೀಕ್ಷೆ ಏ.10ರಂದು ನಡೆಯಬೇಕಿತ್ತು, ಆದರೆ ಆಡಳಿತಾತ್ಮಕ ಕಾರಣಗಳಿಂದ ಪರೀಕ್ಷೆಯನ್ನು ಮೇ.16ನೇ ಭಾನುವಾರ ನಡೆಸುವಂತೆ ಮುಂದೂಡಲಾಗಿದೆ ಎಂದವರು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

