
ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಕೋವಿಡ್-19 ಸೋಂಕು ಮತ್ತೆ ತೀವ್ರಗೊಳ್ಳುತ್ತಿರುವ ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಸುಧಾಕರ್ ಭಾಗವಹಿಸಿದ್ದರು. ಈ ವೇಳೆ ಆರೋಗ್ಯ ಇಲಾಖೆಯ ಮುಖ್ಯ ಕಾರ್ಯದರ್ಶಿ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾಹಿತಿ ನೀಡಿರುವ ಅವರು, ಪ್ರಸ್ತುತ ರಾಜ್ಯದಲ್ಲಿ ಕೋವಿಡ್-19 ಲಸಿಕೆ ಪ್ರಕ್ರಿಯೆ ವೇಗವಾಗಿ ನಡೆಯುತ್ತಿದ್ದು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಳವಾಗಿದ್ದರು, ನೈಟ್ ಕರ್ಫ್ಯೂ, ಲಾಕ್‌ಡೌನ್ ಅಗತ್ಯವಿಲ್ಲವೆಂದು ತಿಳಿಸಿದ್ದಾರೆಂದು ಮೂಲಗಳು ತಿಳಿಸಿವೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

