
ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ನಗರಸಭೆ, ಪುರಸಭೆ ಮತ್ತು ಗ್ರಾಮ ಪಂಚಾಯಿತಿಯ 45 ವರ್ಷದಿಂದ 60 ವರ್ಷದವರೆಗಿನ ದೀರ್ಘಕಾಲದ ಖಾಯಿಲೆಯಿಂದ ಬಳಲುತ್ತಿರುವ ಹಾಗೂ 60 ವರ್ಷ ಮೇಲ್ಪಟ್ಟ ಹಾಲಿ ಸದಸ್ಯರು ಮತ್ತು ಮಾಜಿ ಸದಸ್ಯರುಗಳಿಗಾಗಿ, ಜಿಲ್ಲೆಯ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಲಸಿಕೆ ನೀಡುವ ವಿಶೇಷ ಅಭಿಯಾನದಲ್ಲಿ ಜಿಲ್ಲೆಯ ಒಟ್ಟು 75 ಮಂದಿ ಜನಪ್ರತಿನಿಧಿಗಳು ಲಸಿಕೆ ಪಡೆದಿದ್ದಾರೆ.

ಜಿಲ್ಲೆಯ ಹೊಸಕೋಟೆ ತಾಲ್ಲೂಕಿನಲ್ಲಿ 36 ಮಂದಿ, ದೇವನಹಳ್ಳಿ ತಾಲ್ಲೂಕಿನಲ್ಲಿ 16 ಮಂದಿ, ನೆಲಮಂಗಲ ತಾಲ್ಲೂಕಿನಲ್ಲಿ 15 ಮಂದಿ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಅತಿ ಕಡಿಮೆ 8 ಮಂದಿ ಮಾತ್ರ ಲಸಿಕೆ ಪಡೆದಿದ್ದಾರೆ.
ಜಿಲ್ಲಾದ್ಯಂತ ಒಟ್ಟು 75 ಜನಪ್ರತಿನಿಧಿಗಳು ಕೋವಿಡ್-19 ಲಸಿಕೆ ಪಡೆದಿದ್ದಾರೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುಳಾದೇವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

