ಬೇಸಿಗೆಯಲ್ಲಿ ಉದ್ಯೋಗ ದೊರಕಿಸಲು ‘ದುಡಿಯೋಣ ಬಾ’ ಅಭಿಯಾನ: ಸಿಇಓ ಎಂ.ಆರ್.ರವಿಕುಮಾರ್

ಬೆಂ.ಗ್ರಾ.ಜಿಲ್ಲೆ: ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಭಾಗದ ಜನರು ಉದ್ಯೋಗ ಅರಸಿಕೊಂಡು ವಲಸೆ ಹೋಗುವುದನ್ನು ತಡೆಯುವುದಕ್ಕಾಗಿ ಹಾಗೂ ಗ್ರಾಮೀಣ ಭಾಗದ ಜನರಿಗೆ ನಿರಂತರವಾಗಿ ಕೆಲಸ ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಪಂಚಾಯತ್‌ ರಾಜ್‌ ಇಲಾಖೆಯು ಮಾರ್ಚ್‌ 15 ರಿಂದ (ಸೋಮವಾರ) ಜೂನ್‌ 15 ರವರೆಗೆ ಮೂರು ತಿಂಗಳ ಅವಧಿಗೆ, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆ ಅಡಿಯಲ್ಲಿ ‘ದುಡಿಯೋಣ ಬಾ’ ಎಂಬ ಅಭಿಯಾನವನ್ನು ರಾಜ್ಯಾದ್ಯಂತ ಹಮ್ಮಿಕೊಂಡಿದ್ದು, ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಭಾಗದಲ್ಲಿಯೂ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ತಿಳಿಸಿದ್ದಾರೆ.

ಬೇಸಿಗೆ ಅವಧಿಯಲ್ಲಿ ನಿರಂತರವಾಗಿ ಕೆಲಸ ಒದಗಿಸುವುದು, ಯೋಜನೆಯಿಂದ ಹೊರಗುಳಿದ ದುರ್ಬಲ ಕುಟುಂಬಗಳನ್ನು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡುವುದು, ಗ್ರಾಮೀಣ ಸ್ಥಳೀಯರಿಗೆ ಉದ್ಯೋಗ ನೀಡುವ ಮೂಲಕ ಸ್ವಾವಲಂಬಿ ಬದುಕು ಸಾಗಿಸುವಂತೆ ಮಾಡುವುದು, ಕೆಲಸ ಕಾಮಗಾರಿ ಬೇಡಿಕೆ ಸಲ್ಲಿಸುವ ವಿಧಾನವನ್ನು ಸರಳಗೊಳಿಸುವುದು ‘ದುಡಿಯೋಣ ಬಾ’ ಅಭಿಯಾನ ಉದ್ದೇಶವಾಗಿದೆ.

ಅಭಿಯಾನದ ಯಶಸ್ವಿ ಅನುಷ್ಠಾನಕ್ಕೆ ವಿವಿಧ ಹಂತಗಳನ್ನು ನಿಗದಿಪಡಿಸಲಾಗಿದ್ದು, ಮಾರ್ಚ್ 15 ರಿಂದ 22 ರವರೆಗೆ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಅಭಿಯಾನ ಕುರಿತು ಜನ ಜಾಗೃತಿ ನಡೆಯಲಿದೆ. ಉದ್ಯೋಗ ಚೀಟಿ ಹೊಂದಿರದ ಕುಟುಂಬಗಳಿಂದ ಉದ್ಯೋಗ ಚೀಟಿಗಾಗಿ ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಪಡೆದುಕೊಳ್ಳಲಾಗುವುದು. ಜನ ಜಾಗೃತಿ ಕಾರ್ಯಕ್ರಮದ ಸಂದರ್ಭದಲ್ಲಿ ನೋಂದಾಯಿತ ಕೂಲಿ ಕಾರ್ಮಿಕರಿಂದ ಒಂದೇ ಬಾರಿಗೆ ಮೂರು ತಿಂಗಳ ಕೆಲಸದ ಬೇಡಿಕೆ ಪಡೆಯಲಾಗುವುದು. ಮಾರ್ಚ್ 23 ರಿಂದ 31ರವರೆಗೆ ಅರ್ಜಿ ಸಲ್ಲಿಸಿದ ಎಲ್ಲ ಕುಟುಂಬಗಳಿಗೆ ಉದ್ಯೋಗ ಚೀಟಿಯನ್ನು ಜಿಲ್ಲಾ ಪಂಚಾಯಿತಿ ವಿತರಿಸಲಿದೆ. ಕೆಲಸ ಒದಗಿಸಲು ಕಾಮಗಾರಿಗಳ ಅಂದಾಜು ಪಟ್ಟಿ ತಯಾರಿಕೆ, ತಾಂತ್ರಿಕ ಮತ್ತು ಆಡಳಿತ ಮಂಜೂರಾತಿ, ಸಾರ್ವಜನಿಕ ಮಾಹಿತಿ ಫಲಕ ಅಳವಡಿಕೆ, ಜಿಯೋ ಟ್ಯಾಗ್ ಇತ್ಯಾದಿ ಪೂರ್ವ ಸಿದ್ಧತೆ ಮಾಡಿಕೊಳ್ಳಲಿದ್ದು, ಕೂಲಿಕಾರರ ಗುಂಪುಗಳನ್ನು ರಚಿಸಿ, ಈ ಅವಧಿಯಲ್ಲಿ ತರಬೇತಿ ನೀಡಲಿದೆ.

ಏಪ್ರಿಲ್ 1 ರಿಂದ ಜೂನ್15 ರವರೆಗೆ ಪ್ರತಿ ಸೋಮವಾರ ಕೆಲಸದ ಬೇಡಿಕೆ ಸಲ್ಲಿಸಿದ ವಿವರಗಳನ್ನು ದಾಖಲಿಸಿ ಎರಡು ದಿನಗಳೊಳಗೆ ಕೆಲಸ ಒದಗಿಸಲಾಗುವುದು. ಕೆಲಸಗಾರರಿಗೆ ನಿರಂತರವಾಗಿ ಕೆಲಸ ಒದಗಿಸಲಾಗುವುದು ಹಾಗೂ ಕೆಲಸದ ಸ್ಥಳದಲ್ಲಿ ಕುಡಿಯುವ ನೀರು, ನೆರಳು, ಶಿಶುಪಾಲನೆ ಸೌಲಭ್ಯಗಳನ್ನು ಕಲ್ಪಿಸಲಾಗುವುದು. 

ಅಭಿಯಾನದ ಸುಗಮ ನಿರ್ವಹಣೆ ಹಾಗೂ ಪ್ರಗತಿಗಾಗಿ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಉಸ್ತುವಾರಿ ಸಮಿತಿಗಳನ್ನು ರಚಿಸಲಾಗಿದೆ.

ಅಭಿಯಾನದ ಅವಧಿಯಲ್ಲಿ ಬದು, ಕೃಷಿ ಹೊಂಡ, ತೆರೆದ ಬಾವಿ, ಸೋಕ್ ಪಿಟ್ ನಿರ್ಮಾಣ ಮಾಡಲು ಅವಕಾಶ ಕಲ್ಪಿಸಲಾಗಿದೆ. ಸಮಗ್ರ ಕೆರೆ ಅಭಿವೃದ್ದಿ ಕಾರ್ಯಕ್ರಮದಡಿ ಕಾಲುವೆಗಳ ಪುನಶ್ಚೇತನ, ಕೆರೆಗಳ ಹೂಳು ತೆಗೆಯುವುದು, ಕೆರೆ ಏರಿ ಮತ್ತು ಕೋಡಿ ದುರಸ್ತಿ, ಕೆರೆ ಅಂಚಿನಲ್ಲಿ ಅರಣ್ಯೀಕರಣ ಕಾಮಗಾರಿ ಕೈಗೊಳ್ಳಲು ಆದ್ಯತೆ ನೀಡಲಾಗುವುದು. ರಸ್ತೆ ಬದಿ ನೆಡುತೋಪು, ಬ್ಲಾಕ್ ಪ್ಲಾಂಟೇಶನ್, ಕೃಷಿ ಅರಣ್ಯೀಕರಣ, ತೋಟಗಾರಿಕೆ ಬೆಳೆ ಬೆಳೆಯಲು ಮುಂಗಡ ಗುಂಡಿ ತೆಗೆಯುವುದು, ಕೊಳವೆಬಾವಿಗಳಿಗೆ ನೀರು ಮರುಪೂರಣ(ಬೋರ್ ವೆಲ್ ರಿಚಾರ್ಜ್) ಕಾಮಗಾರಿ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. 

ದುಡಿಯೋಣ ಬಾ ಅಭಿಯಾನದ ಅನುಷ್ಠಾನ ಹಾಗೂ ಮೇಲ್ವಿಚಾರಣೆಗಾಗಿ ನರೇಗಾ ಯೋಜನೆಯಡಿ ದೀರ್ಘಕಾಲ ಮೇಟ್ ಆಗಿ ಕಾರ್ಯನಿರ್ವಹಿಸುವ, ಅನುಭವ ಹೊಂದಿರುವ ಹಾಗೂ ನಾಯಕತ್ವ ಹೊಂದಿರುವವರನ್ನು ಪ್ರತಿ ಗ್ರಾಮ ಪಂಚಾಯಿತಿಗೆ ಒಬ್ಬರಂತೆ ಅಭಿಯಾನದ ಅವಧಿಗೆ *”ದುಡಿಯೋಣ ಬಾ ಅಭಿಯಾನ ರಾಯಭಾರಿ”* ಆಗಿ ನೇಮಿಸಲಾಗುವುದು.

ನರೇಗಾ ಅಡಿ ಪ್ರತಿ ಕುಟುಂಬಕ್ಕೆ 100 ದಿನಗಳ ಉದ್ಯೋಗ ಪಡೆಯಲು ಅವಕಾಶವಿದ್ದು, ಬೇಸಿಗೆ ಅವಧಿಯಲ್ಲಿ ಎಪ್ರಿಲ್ 01 ರಿಂದ 60 ದಿನಗಳು ಕೆಲಸ ನಿರ್ವಹಿಸಿದಲ್ಲಿ, ಪ್ರತಿದಿನಕ್ಕೆ 289ರೂ.ಗಳಂತೆ 60 ದಿನಗಳಿಗೆ ₹17,340 ರೂ.ಗಳ ಕೂಲಿ ಪಡೆಯಬಹುದಾಗಿದ್ದು, ಜಿಲ್ಲೆಯ ಗ್ರಾಮೀಣ ಭಾಗದ ಜನರು ಅಭಿಯಾನದ ಸದುಪಯೋಗ ಪಡೆದುಕೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು (Tamil Nadu) ಮತ್ತು ಪಶ್ಚಿಮ ಬಂಗಾಳ (West Bengal) ಚುನಾವಣೆ ದೇಶಾದ್ಯಂತ ಸುದ್ದಿಯಾಗಿದೆ. ತಮಿಳುನಾಡಿನಲ್ಲಿ ಟಿವಿಕೆ (TVK) ವಿಜಯ್ (Vijay) ಸದ್ದು ಮಾಡಿದರೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರದ್ದೇ (Mamata banerjee) ಸುದ್ದಿ.

[ccc_my_favorite_select_button post_id="121883"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]