
ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಗುರುವಾರದ ಕೋವಿಡ್-19 ವರದಿಯಲ್ಲಿ ಜಿಲ್ಲೆಯ 26 ಜನರಿಗೆ ಸೋಂಕು ದೃಢಪಡುವ ಮೂಲಕ, ಸೋಂಕಿತರ ಸಂಖ್ಯೆ ಕೆಲವೇ ದಿನಗಳಲ್ಲಿ ದ್ವಿಶತಕದ ಗಡಿಗೆ ಬಂದು ನಿಂತಿದೆ.

ಜಿಲ್ಲೆಯಲ್ಲಿ ನೆಲಮಂಗಲ ತಾಲೂಕಿನಲ್ಲಿ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ ತೀವ್ರವಾಗಿದ್ದು 7 ಪುರುಷರು ಹಾಗೂ 5 ಮಹಿಳೆಯರು ಸೇರಿದಂತೆ 12 ಜನರಿಗೆ ಸೋಂಕು ದೃಢಪಟ್ಟಿದ್ದರೆ, 4 ಮಂದಿ ಪುರುಷರು ಮತ್ತು 3 ಮಹಿಳೆಯರಿಗೆ ಸೇರಿ 7 ಮಂದಿಗೆ ಸೋಂಕು ದೃಢ ಪಟ್ಟು ದೇವನಹಳ್ಳಿ ತಾಲೂಕು ಎರಡನೇ ಸ್ಥಾನದಲ್ಲಿದೆ.
ಉಳಿದಂತೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 3 ಪುರುಷರು, ಓರ್ವ ಮಹಿಳೆ ಸೇರಿದಂತೆ ನಾಲ್ಕು ಮಂದಿ. ಹೊಸಕೋಟೆ ತಾಲೂಕಿನ ಓರ್ವ ಪುರುಷ, ಇಬ್ಬರು ಮಹಿಳೆಯರಿಗೆ ಸೋಂಕು ದೃಢಪಟ್ಟಿದೆ.
ಪ್ರಸ್ತುತ ಜಿಲ್ಲೆಯಲ್ಲಿ 46 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 185ಕ್ಕೆ ಏರಿಕೆಯಾಗಿದ್ದರೆ, 06ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ಆರೋಗ್ಯ ಇಲಾಖೆಯಿಂದ ನಿರಂತರವಾಗಿ ತಪಾಸಣೆ ನಡೆಸಲಾಗುತ್ತಿದ್ದು, 551 ಮಂದಿಯ ಫಲಿತಾಂಶ ಬರಬೇಕಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

