
ದೊಡ್ಡಬಳ್ಳಾಪುರ: ಅನುಮಾನಸ್ಪದವಾಗಿ ಸಾವನಪ್ಪಿರುವ ಚಿರತೆಯೊಂದರ ಕಳೇಬರವೊಂದು ತಾಲೂಕಿನ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದ ಸಮೀಪದಲ್ಲಿರುವ ಬೆಟ್ಟದಲ್ಲಿ ಕಂಡು ಬಂದಿದೆ. (ವಿಡಿಯೋ ನೋಡಿ)

ಇಂದು ಬೆಳಗ್ಗೆ ಗ್ರಾಮದ ಯುವಕರು ಬೆಟ್ಟದ ಬಳಿ ತೆರಳಿದ್ದಾಗ ಚಿರತೆಯ ಕಳೇಬರ ಕಂಡಿದೆ. ಸುಮಾರು ನಾಲ್ಕು ವರ್ಷದೆನ್ನಲಾಗುತ್ತಿರುವ ಚಿರತೆ ಸತ್ತು ಸುಮಾರು ಒಂದು ವಾರವಾಗಿದೆ ಎಂದು ಶಂಕಿಸಲಾಗಿದ್ದು, ಚಿರತೆ ಸಾವಿಗೆ ಕಾರಣ ತಿಳಿದು ಬಂದಿಲ್ಲ.
ಗ್ರಾಮಸ್ಥರು ಅರಣ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಚಿರತೆಯ ಕಳೇಬರ ಪತ್ತೆಯಾಗಿರುವ ಪೊಟೋ ಮತ್ತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಕುರಿತು ಅರಣ್ಯ ಇಲಾಖೆಯ ಅಧಿಕಾರಿ ಚೇತನ್ ಹರಿತಲೇಖನಿಯೊಂದಿಗೆ ಮಾತನಾಡಿ, ಚಿರತೆ ಕಳೇಬರ ಪತ್ತೆಯಾಗಿರುವ ಕುರಿತು ಯಾವುದೇ ಮಾಹಿತಿ ಬಂದಿಲ್ಲವಾಗಿದ್ದು, ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಗುವುದೆಂದು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

