
ದೊಡ್ಡಬಳ್ಳಾಪುರ: ಜಿಲ್ಲಾ ಪಂಚಾಯಿತಿ ಪಶುಸಂಗೋಪನಾ ಇಲಾಖೆ ಅನುದಾನದಡಿ ರಾಜಘಟ್ಟ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ 20 ಜನ ಅರ್ಹ ಫಲಾನುಭವಿಗಳಿ 2020-21ನೇ ಸಾಲಿನ ಅನುದಾನದಲ್ಲಿ ಕೋಳಿ ಮರಿಗಳನ್ನು ನಗರದ ಜೆಡಿಎಸ್ ಜಿಲ್ಲಾ ಕಾರ್ಯಾಲಯದಲ್ಲಿ ವಿತರಣೆ ಮಾಡಿರುವುದಕ್ಕೆ ಬಿಜೆಪಿ ರಾಜ್ಯ ಸಾಮಾಜಿಕ ಜಾಲತಾಣದ ಸದಸ್ಯ ಶಿವಾನಂದರೆಡ್ಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಹರಿತಲೇಖನಿಯಲ್ಲಿ ಸುದ್ದಿ ಪ್ರಕಟವಾದ ಬೆನ್ನಲ್ಲೆ ಜಿಪಂ ಸದಸ್ಯೆ ಅವರ ನಡೆಗೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಸರ್ಕಾರಿ ಅನುದಾನದಲ್ಲಿ ಅರ್ಹ ಫಲಾನುಭವಿಗಳಿಗೆ ಯಾವುದೇ ವಸ್ತು ಅಥವಾ ಮತ್ತಿತರೆ ವಸ್ತುಗಳನ್ನು ವಿತರಣೆ ಮಾಡುವಾಗ ಸಂಬಂಧ ಪಟ್ಟ ಇಲಾಖೆಯ ಕಚೇರಿ ಅಥವಾ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ವಿತರಣೆ ಮಾಡಬೇಕು. ಆದರೆ ಜೆಡಿಎಸ್ ಪಕ್ಷದ ರಾಜಘಟ್ಟ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯೆ ಪದ್ಮಾವತಿ ಬಿ.ಮುನೇಗೌಡ ಅವರು ಸರ್ಕಾರಿ ಅನುದಾನದಲ್ಲಿ ಬಂದಿರುವ ಕೋಳಿ ಮರಿಗಳನ್ನು ಜೆಡಿಎಸ್ ಜಿಲ್ಲಾ ಕಾರ್ಯಾಲಯದಲ್ಲಿ ವಿತರಣೆ ಮಾಡಿರುವುದು ತಪ್ಪು ಎಂದಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

