
ದೊಡ್ಡಬಳ್ಳಾಪುರ: ಮಾ.29ರಂದು ನಡೆಯಲಿರುವ ತಾಲ್ಲೂಕಿನ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯ 18 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾದ ಶುಕ್ರವಾರ ಒಟ್ಟು 94 ನಾಮಪತ್ರಗಳು ಸಲ್ಲಿಕೆಯಾಗಿವೆ.

ಪರಿಶಿಷ್ಟ ಜಾತಿ- 24, ಪರಿಶಿಷ್ಟ ಪಂಗಡ-3, ಹಿಂದುಳಿದ ವರ್ಗ ‘ಎ’ 6, ಹಿಂದುಳಿದ ವರ್ಗ ‘ಬಿ’ 3, ಸಾಮಾನ್ಯ 58 ಜನ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಇದರಲ್ಲಿ ಒಟ್ಟು ಸಾಮಾನ್ಯ ಅಭ್ಯರ್ಥಿಗಳು 60 ಹಾಗೂ ಮಹಿಳಾ ಮೀಸಲಾತಿ ಸ್ಥಾನಕ್ಕೆ 34 ಜನ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಮಾ. 20ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಮಾ.22 ನಾಮ ಪತ್ರಗಳನ್ನು ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿದೆ ಎಂದು ತಹಶೀಲ್ದಾರ್ ಟಿ.ಎಸ್.ಶಿವರಾಜ್ ತಿಳಿಸಿದ್ದಾರೆ.
ಕಾರೇಪುರದಲ್ಲಿ ಗ್ರಾಮ ವಾಸ್ತವ್ಯ ನಾಳೆ ( ಮಾ.19): ರಾಜ್ಯ ಸರ್ಕಾರದ ಮಹತ್ವದ ಕಾರ್ಯಕ್ರಮವಾದ ಹಳ್ಳಿ ಕಡೆಗೆ ಜಿಲ್ಲಾಧಿಕಾರಿಗಳ ನಡೆ ಕಾರ್ಯಕ್ರಮದ ಅಂಗವಾಗಿ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ ಕಾರೇಪುರ ಗ್ರಾಮದಲ್ಲಿ ತಹಶೀಲ್ದಾರ್ ಟಿ.ಎಸ್.ಶಿವರಾಜ್ ಹಾಗೂ ಶಾಸಕ ಟಿ.ವೆಂಕಟರಮಣಯ್ಯ ಮಾ.20 ರಂದು ಬೆಳಿಗ್ಗೆ 10 ಗಂಟೆಯಿಂದ ವಾಸ್ತವ್ಯ ಮಾಡಲಿದ್ದಾರೆ. ಇದೇ ಸಮಯದಲ್ಲಿ ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿರಲಿದ್ದಾರೆ.
ಘಾಟಿ ಮುಡಿಕೂದಲು ಬಹಿರಂಗ ಹರಾಜು: ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳ ಹರಕೆಯ ಮುಡಿಯಿಂದ ಬೀಳುವ ಕೂದಲಿನ ಬಹಿರಂಗ ಹರಾಜು ಮಾ.29 ರಂದು ಸಂಜೆ 4 ಗಂಟೆಗೆ ದೇವಾಲಯ ಸಮೀಪದ ಕಲ್ಯಾಣ ಮಂಟಪದ ಆವರಣದಲ್ಲಿ ಬಹಿರಂಗ ಹರಾಜು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

