
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಮಹತ್ವದ ಕಾರ್ಯಕ್ರಮವಾದ ಹಳ್ಳಿ ಕಡೆಗೆ ಜಿಲ್ಲಾಧಿಕಾರಿಗಳ ನಡೆ ಕಾರ್ಯಕ್ರಮದ ಅಂಗವಾಗಿ, ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ ಕಾರೇಪುರ ಗ್ರಾಮದಲ್ಲಿ ತಹಶೀಲ್ದಾರ್ ಟಿ.ಎಸ್.ಶಿವರಾಜ್ ಹಾಗೂ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ಆರಂಭಿಸಲಾಗಿದೆ.

ಕಾರೇಪುರ ಗ್ರಾಮದ ಸರ್ಕಾರಿ ಶಾಲೆ ಆವರಣದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ಕೆ ಶಾಸಕ ಟಿ.ವೆಂಕಟರಮಣಯ್ಯ ಚಾಲನೆ ನೀಡಿದರು.
ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಲಾಗುತ್ತಿದ್ದು, ಸ್ಥಳದಲ್ಲೆ ಪರಿಹರಿಸಲಾಗುತ್ತಿದೆ.
ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಪಂ ಅಧ್ಯಕ್ಷ ನಾರಾಯಣಗೌಡ, ಮಾಜಿ ಅಧ್ಯಕ್ಷ ಡಿ.ಸಿ.ಶಶಿಧರ್, ಇಒ ಮುರುಡಯ್ಯ, ತಾಲೂಕು ವೈದ್ಯಾಧಿಕಾರಿ ಡಾ.ಪರಮೇಶ್ವರ, ಸಿಡಿಪಿಒ ಎಸ್.ಅನಿತಾಲಕ್ಷ್ಮೀ ಸೇರಿದಂತೆ ಕಂದಾಯ ಇಲಾಖೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

