
ದೊಡ್ಡಬಳ್ಳಾಪುರ: 2020-21ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ, ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಲ್ಲಿ ಹೊಸ ವಿದ್ಯಾರ್ಥಿಗಳಿಗೆ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್ ತಿಳಿಸಿದ್ದಾರೆ.

ಈ ಕುರಿತು ಹರಿತಲೇಖನಿಗೆ ಮಾಹಿತಿ ನೀಡಿರುವ ಅವರು, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಸುತ್ತೋಲೆಗಳಲ್ಲಿ ಫೆ.1ರಿಂದ 9 ಮತ್ತು 10ನೇ ತರಗತಿ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ 11ಮತ್ತು 12ನೇ ತರಗತಿಗಳನ್ನು. ಫೆ.22ರಿಂದ ಬೆಂಗಳೂರು ನಗರ ಬಿಬಿಎಂಪಿ ಹಾಗೂ ಕೇರಳ ಗಡಿ ಪ್ರದೇಶಗಳಲ್ಲಿ ವಿಧ್ಯಾಗಮ ಮಾಡಲು ಹಾಗೂ ಇತರ ಕಡೆಗಳಲ್ಲಿ 6,7,8ನೇ ತರಗತಿಗಳನ್ನು ಪ್ರತಿದಿನ ಪೂರ್ಣವಧಿ ನಡೆಸಲು ಮಾರ್ಗ ಸೂಚಿ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ 2020-21ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಸರ್ಕಾರ ಹಾಗೂ ಜಿಲ್ಲಾಡಳಿತ ನೀಡುವ ಸೂಚನೆಯನ್ವಯ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲಾಗುತ್ತಿದೆ.
ಆದ್ದರಿಂದ 2020-21ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ 6ರಿಂದ10ನೇ ತರಗತಿಗಳಿಗೆ ಹೊಸ ವಿದ್ಯಾರ್ಥಿಗಳು ಪ್ರವೇಶ ಪಡೆಯಲು www.sw.kar.nic.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

