HL Web Exclusive: ದೊಡ್ಡಬಳ್ಳಾಪುರದ ಸರ್ಕಾರಿ ಕಟ್ಟಡದ ಮೇಲೆ ಕ್ರಿಶ್ಚಿಯನ್ ಮಿಷನರಿ ಕಣ್ಣು…? / ನಗರ ಪ್ರಾಥಮಿಕ ಆಸ್ಪತ್ರೆ ಕಟ್ಟಡವನ್ನು ಕ್ರಿಶ್ಚಿಯನ್ ಮಿಷನರಿಗಳಿಗೆ ಹಸ್ತಾಂತರಿಸಲು ಷಡ್ಯಂತ್ರದ ಆರೋಪ…!

ದೊಡ್ಡಬಳ್ಳಾಪುರ: ತಾಲೂಕಿನ ಸರ್ಕಾರಿ ಕಟ್ಟಡದ ಮೇಲೆ‌ ಕ್ರಿಶ್ಚಿಯನ್ ಮಿಷನರಿ ಕಣ್ಣು ಬಿದ್ದಿದ್ದು, ನಗರದ ಡಾ.ರಾಜ್ ಕುಮಾರ್ ವೃತ್ತದ ಬಳಿ ನಗರದ ಪ್ರಾಥಮಿಕ ಅರೊಗ್ಯ ಕೇಂದ್ರ ವಾಗಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಕಟ್ಟಡವನ್ನು, ಸೇವೆ ಹೆಸರಲ್ಲಿ ಕ್ರಿಶ್ಚಿಯನ್ ಮಿಷನರಿಗಳಿಗೆ ಹಸ್ತಾಂತರಿಸುವ ಷಡ್ಯಂತ್ರ ನಡೆದಿದೆ ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಹೆಚ್.ಎಸ್.ಅಶ್ವಥ್ ನಾರಾಯಣ ಕುಮಾರ್ ಆರೋಪಿಸಿದ್ದಾರೆ.

ಈ ಕುರಿತು ಹರಿತಲೇಖನಿಗೆ ನೀಡಿರುವ ವಿಶೇಷ ಮಾಹಿತಿಯಲ್ಲಿ, ನಗರದ ಹೃದಯ ಭಾಗದಲ್ಲಿರುವ ಈ ಕಟ್ಟಡ ಹಲವು ದಶಕಗಳಿಂದ ನಗರದಲ್ಲಿ ತಾಯಿ ಮಗು ಆಸ್ಪತ್ರೆ ಸೇವೆ ಸಲ್ಲಿಸುತ್ತಿದ್ದು, ಟಿಬಿ ವೃತ್ತದ ಬಳಿ ನೂತನ ಕಟ್ಟಡ ನಿರ್ಮಾಣವಾದ ಆಸ್ಪತ್ರೆ ಸ್ಥಳಾಂತರಗೊಂಡ ಕಾರಣ ಬಳಿಕ ಖಾಲಿ ಉಳಿದಿತ್ತು. ಈ ವೇಳೆ ಚಿಕಿತ್ಸೆಗೆ ನಗರವಾಸಿಗಳು ನೂತನ ಆಸ್ಪತ್ರೆಗೆ ತೆರಳಲು ಉಂಟಾಗುವ ಅನಾನುಕೂಲವನ್ನು ತಪ್ಪಿಸಲು ಶಾಸಕ ಟಿ.ವೆಂಕಟರಮಣಯ್ಯ ನವರು ಜಿಲ್ಲಾ ಆರೋಗ್ಯ ಇಲಾಖೆಯ ಮೇಲೆ ಒತ್ತಡ ಹೇರಿ ನಗರವಾಸಿಗಳಿಗೆ ಅನುಕೂಲವಾಗುವಂತೆ ಈ ಖಾಲಿ ಕಟ್ಟದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನಾಗಿಸಿದ ಪರಿಣಾಮ ಇದರಲ್ಲಿಯೇ ಜಿಲ್ಲಾ ವಿಕಲಚೇತನರ ಪುನರ್ ವಸತಿ ಕೇಂದ್ರ ಹಾಗೂ ಆರೋಗ್ಯ ಮತ್ತು ಕ್ಷೇಮ ಕೇಂದ್ರವಾಗಿದ್ದು ತಾಲೂಕಿನ ಜನತೆಗೆ  ಸೇವೆ ನೀಡುತ್ತಿದೆ. 

ಆದರೆ ಕೆಲ ಪ್ರಭಾವಿಗಳು ಷಡ್ಯಂತ್ರ ರೂಪಿಸಿದ್ದು, ಸೇವೆಯ ಹೆಸರಲ್ಲಿ ಕ್ರಿಶ್ಚಿಯನ್ ಮಿಷಿನರಿಗಳಿಗೆ ಈ ಕಟ್ಟಡ ಬಿಟ್ಟು ಕೊಡುವ ಹುನ್ನಾರವನ್ನು ಉನ್ನತ ಮಟ್ಟದ ಅಧಿಕಾರಿಗಳ ಮೂಲಕ ನಡೆಸುತ್ತಿದ್ದಾರೆ. ಈಗಾಗಲೇ ಕ್ರಿಶ್ಚಿಯನ್ ಮಿಷನರಿಗಳು ಸೇವೆಯ ಹೆಸರಲ್ಲಿ ಮತಾಂತರ ಮಾಡುತ್ತಿರುವ ಆರೋಪಗಳು ವ್ಯಾಪಕವಾಗಿವೆ, ಅದರ ಬೆನ್ನಲ್ಲೆ ಈ ರೀತಿಯ ಬೆಳವಣಿಗೆ ದೊಡ್ಡಬಳ್ಳಾಪುರ ತಾಲೂಕಿಗೆ ಆತಂಕಕಾರಿಯಾಗಲಿದೆ ಎಂದು ಆರೋಪಿಸಿದರು.

ಒಂದು ವೇಳೆ ಉತ್ತಮ ಸೇವೆ ದೊರಕಿಸುವ ಉದ್ದೇಶವೆ ಇದ್ದಲ್ಲಿ ಸರ್ಕಾರದ ಅರೆಸಂಸ್ಥೆಗಳಾದ ಜಯದೇವ ಆಸ್ಪತ್ರೆ, ಕಿದ್ವಾಯ್ ಆಸ್ಪತ್ರೆ ತೆರೆಯಲು ಬಿಟ್ಟುಕೊಡಲಿ, ಆದರೆ ಯಾವುದೇ ಕಾರಣಕ್ಕು ಕ್ರಿಶ್ಚಿಯನ್ ಮಿಷಿನರಿಗಳ ಸಂಸ್ಥೆಗೆ ಸರ್ಕಾರಿ ಕಟ್ಟಡವನ್ನು ಬಿಟ್ಟುಕೊಡುವುದನ್ನು ತಾಲೂಕಿನ ಜನತೆ ಸಹಿಸುವುದಿಲ್ಲ.

ಆದಾಗ್ಯೂ ಅಧಿಕಾರ ದುರುಪಯೋಗ ಪಡಿಸಿಕೊಂಡು ಸರ್ಕಾರಿ ಕಟ್ಟಡ ಬಿಟ್ಟುಕೊಡಲು ಮುಂದಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು (Tamil Nadu) ಮತ್ತು ಪಶ್ಚಿಮ ಬಂಗಾಳ (West Bengal) ಚುನಾವಣೆ ದೇಶಾದ್ಯಂತ ಸುದ್ದಿಯಾಗಿದೆ. ತಮಿಳುನಾಡಿನಲ್ಲಿ ಟಿವಿಕೆ (TVK) ವಿಜಯ್ (Vijay) ಸದ್ದು ಮಾಡಿದರೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರದ್ದೇ (Mamata banerjee) ಸುದ್ದಿ.

[ccc_my_favorite_select_button post_id="121883"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]