ಖಾಸಗೀಕರಣದಿಂದ ದೇಶದ ಅಭಿವೃದ್ಧಿ: ಡಾ.ವಿಜಯ ಸಂಕೇಶ್ವರ

ದಾವಣಗೆರೆ: ದೇಶದ ಆರ್ಥಿಕ ಭದ್ರತೆ ಮತ್ತು ಸಾಮಾಜಿಕ ಅಭಿವೃದ್ಧಿಗೆ ಖಾಸಗೀಕರಣವೊಂದೇ ಸೂಕ್ತ ಹಾಗೂ ಪರಿಹಾರ ಮಾರ್ಗ ಎಂದು ಉದ್ಯಮಿ ಹಾಗೂ ವಿಆರ್‍ಎಲ್ ಸಮೂಹ ಸಂಸ್ಥೆ ಚೇರಮನ್ ಡಾ.ವಿಜಯ ಸಂಕೇಶ್ವರ ಅಭಿಪ್ರಾಯಪಟ್ಟರು.

ದಾವಣಗೆರೆ ವಿಶ್ವವಿದ್ಯಾನಿಲಯದ ವತಿಯಿಂದ ಸೋಮವಾರ ಏರ್ಪಡಿಸಿದ್ದ ಸಾಧನೆ-ಪ್ರೇರಣೆ ಕುರಿತು ಸಾಧಕರೊಂದಿಗೆ ಮಾತುಕತೆ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಗತ್ತಿನ ಯಾವುದೇ ದೇಶದಲ್ಲಿಯೂ ಸರ್ಕಾರವೇ ಕಂಪನಿಗಳನ್ನು ತೆರೆದು ವಹಿವಾಟು ನಡೆಸುವ ಸಂಪ್ರದಾಯವಿಲ್ಲ. ಶಿಕ್ಷಣ, ಆರೋಗ್ಯ, ಮೂಲಸೌಲಭ್ಯ ಅಭಿವೃದ್ಧಿಗೆ ಮಾತ್ರ ಸರ್ಕಾರದ ಸೇವೆ ಸೀಮಿತವಾಗಿವೆ. ಇದರಿಂದಎಲ್ಲೆಡೆ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿವೆ ಎಂದು ಹೇಳಿದರು.

ಭಾರತದಲ್ಲಿ ರಾಜಕೀಯ ಮತ್ತು ಸ್ವಹಿತಾಸಕ್ತಿಗಾಗಿಯೇ ಸರ್ಕಾರ ಸಂಸ್ಥೆಗಳು ಆರಂಭಿಸಿದಂತಾಗಿದೆ. ಸರ್ಕಾರದ ಹೆಸರಿನಲ್ಲಿ ನಿಗಮ, ಮಂಡಳಿ, ಕಾರ್ಖಾನೆ ಆರಂಭವಾಗಿವೆ. ಕೆಲವರನ್ನು ರಾಜಕೀಯವಾಗಿ ತೃಪ್ತಿ ಪಡಿಸುವುದನ್ನು ಹೊರತುಪಡಿಸಿದರೆ ಅವುಗಳಿಂದ ಸಾರ್ವಜನಿಕರಿಗೆ ಎಷ್ಟು ಉಪಯೋಗವಾಗಿದೆ, ಅದರ ಒಟ್ಟಾರೆ ಪ್ರಯೋಜನಯಾರಿಗೆ ಆಗುತ್ತಿದೆ ಎಂಬುದು ಅರ್ಥವಾಗುತ್ತಿಲ್ಲ. ಆದರೆ ರಾಜಕಾರಣಿಗಳು ಅವುಗಳ ಹೆಸರಿನಲ್ಲಿ ಲಾಭ ಪಡೆಯುತ್ತಿದ್ದಾರೆ.ಅಧಿಕಾರ ಅನುಭವಿಸುತ್ತಿದ್ದಾರೆ. ಇದರಿಂದ ಸಾರ್ವಜನಿಕರ ಮೇಲೆ ಆರ್ಥಿಕ ಹೊರೆ ಬೀಳುತ್ತಿದೆ ಎಂದರು.

ಖಾಸಗಿ ಸಂಸ್ಥೆಗಳಲ್ಲಿ ಏನೇ ಲಾಭ ಗಳಿಸಿದರೂ ಅದಕ್ಕೊಂದು ದಾಖಲೆ ಇರುತ್ತದೆ. ರಾಜಕೀಯ ಹಿತಾಸಕ್ತಿಯಿಂದ ಮುಕ್ತವಾಗಿರುತ್ತದೆ. ಜನಸಾಮಾನ್ಯರನ್ನೂ ಭ್ರಷ್ಟರನ್ನಾಗಿಸುವ ವ್ಯವಸ್ಥೆ ಇರುವುದಿಲ್ಲ. ಆದರೆ ಸತ್ಯ ಶುದ್ಧಕಾಯಕ ಪ್ರಜ್ಞೆ, ನಿಸ್ವಾರ್ಥ, ಪ್ರಾಮಾಣಿಕತನ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಜಾಗ್ರತಗೊಳ್ಳಬೇಕು. ಆಗಷ್ಟೇ ಸಮಾಜವನ್ನು ಸುಧಾರಿಸಲು, ಸದೃಢ ಭಾರತವನ್ನು ನಿರ್ಮಿಸಲು, ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿ ರಾಷ್ಟ್ರವೆಂದು ಗುರುತಿಸಲು ಸಾಧ್ಯ.ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರುಕೈಗೊಂಡ ನಿರ್ಧಾರ ಸರಿಯಾಗಿದೆ ಎಂದು ಸಮರ್ಥಿಸಿಕೊಂಡರು.

ಯಾವುದೇ ವ್ಯಕ್ತಿಗೆ ಮಾರ್ಗದರ್ಶನ ನೀಡಿ ಸಾಧನೆಗೆ ಪ್ರೇರಣೆ ನೀಡಬಹುದು. ಆದರೆ ಅವರನ್ನು ಸಾಧಕರನ್ನಾಗಿ ಮಾಡಲು ಸಾಧ್ಯವಿಲ್ಲ. ಆತ್ಮವಿಶ್ವಾಸ, ದೃಢ ಸಂಕಲ್ಪ ಮತ್ತು ಶ್ರದ್ಧಾಪೂರ್ವಕ ಕಾಯಕಗಳಿಂದ ಮಾತ್ರ ಸಾಧನೆ ಸಾಧ್ಯ. ಇದು ಕಲ್ಲು ಮುಳ್ಳಿನ ಹಾದಿ. ಅದನ್ನು ದಾಟಿ ಮುನ್ನಡೆದಾಗ ಮಾತ್ರ ಯಶಸ್ಸಿನ ಹಾದಿ ಕಂಡುಕೊಳ್ಳಬಹುದು. ದಿನದ 24 ಗಂಟೆಯೂ ಜಾಗೃತವಾಗಿದ್ದು, ಕಾರ್ಯ ನಿರ್ವಹಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು ಎಂದು ಡಾ.ಸಂಕೇಶ್ವರ ಸಲಹೆ ನೀಡಿದರು.

‘ಯಾರೂ ಯಾವುದೇ ಸಾಧಕರನ್ನು ಅನುಕರಣೆ ಮಾಡಬಾರದು. ಅವರ ಸಾಧನೆ ಪ್ರೇರಣೆಯಿಂದ ನಿಮ್ಮದೇ ಶೈಲಿಯಲ್ಲಿ, ನಿಮ್ಮದೇ ಯೋಜನೆ ಮತ್ತು ಯೋಚನೆಯಿಂದ ಕಾರ್ಯ ರೂಪಿಸಿಕೊಳ್ಳಿ. ನಷ್ಟ, ಸಮಸ್ಯೆ, ಸವಾಲುಗಳು ಎಲ್ಲ ಕ್ಷೇತ್ರಗಳಲ್ಲೂ ಸಾಮಾನ್ಯ. ಅವುಗಳನ್ನು ಮೆಟ್ಟಿ ಮುನ್ನಡೆಯುವ ವಿಭಿನ್ನ ದಾರಿ ಕಂಡುಕೊಳ್ಳಿ. ಸೋಲು, ಅವಮಾನ, ನಷ್ಟದ ಅನುಭವ ಉನ್ನತಿಗೆ ಹಾದಿ ತೋರುತ್ತದೆ’ ಎಂದು ತಿಳಿಸಿದರು.ದಾವಣಗೆರೆ ವಿಶ್ವವಿದ್ಯಾನಿಲಯದ ಶೈಕ್ಷಣಿಕ ಪ್ರಗತಿಗೆ ಅಗತ್ಯವಿರುವ ಎಲ್ಲ ನೆರವು ನೀಡಲು ವಿಆರ್‍ಎಲ್ ಸಂಸ್ಥೆ ಬದ್ಧವಾಗಿದೆ. ವಿದ್ಯಾರ್ಥಿಗಳಿಗೆ ಅಗತ್ಯವಿರುವ ವೃತ್ತಿಪರ ಕೌಶಲ್ಯ ಅಭಿವೃದ್ಧಿ, ಮಾರ್ಗದರ್ಶನ, ತರಬೇತಿ ನೀಡುವ ಕುರಿತು ಸಂಸ್ಥೆಯ ಆಡಳಿತ ಮಂಡಳಿ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಶರಣಪ್ಪ ವಿ. ಹಲಸೆ, ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ಮುನ್ನುಗ್ಗುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು. ಜ್ಞಾನಾರ್ಜನೆ, ಸಾಧನೆಗೆ ಬಡತನ ಅಥವಾ ಸಮಸ್ಯೆಗಳು ಅಡ್ಡಿಯಾಗುವುದಿಲ್ಲ. ಅದಕ್ಕೆ ಇಚ್ಛಾಶಕ್ತಿ ಅಗತ್ಯಎಂಬುದನ್ನುಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿದಾವಣಗೆರೆ ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದ ವಿದ್ಯಾರ್ಥಿಗಳ ಪ್ರಾಯೋಗಿಕ ಪತ್ರಿಕೆ ‘ದಾವಿ ಸಮಾಚಾರ’ ಮತ್ತು ಯೂಟೂಬ್‍ಚಾನೆಲ್ ‘ದಾವಿ ಟಿವಿ’ಯನ್ನು ವಿಜಯ ಸಂಕೇಶ್ವರ ಉದ್ಘಾಟಿಸಿದರು.

ಸಿಂಡಿಕೇಟ್ ಸದಸ್ಯರಾದ ಮಲ್ಲಿಕಾರ್ಜುನ ಮಾಡಾಳು, ಡಾ.ಶ್ರೀಧರ, ಇನಾಯತ್‍ಉಲ್ಲಾ ಟಿ, ವಿಜಯಲಕ್ಷ್ಮೀ ಹಿರೇಮಠ, ಪವನ್, ಆಶೀಶ್ ರೆಡ್ಡಿ, ಕರ್ನಾಟಕ ವೃತ್ತಿ ನಾಟಕಅಕಾಡೆಮಿಅಧ್ಯಕ್ಷಯಶವಂತ ಸರದೇಶಪಾಂಡೆ, ಲಲತಾ ವಿಜಯ ಸಂಕೇಶ್ವರ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು (Tamil Nadu) ಮತ್ತು ಪಶ್ಚಿಮ ಬಂಗಾಳ (West Bengal) ಚುನಾವಣೆ ದೇಶಾದ್ಯಂತ ಸುದ್ದಿಯಾಗಿದೆ. ತಮಿಳುನಾಡಿನಲ್ಲಿ ಟಿವಿಕೆ (TVK) ವಿಜಯ್ (Vijay) ಸದ್ದು ಮಾಡಿದರೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರದ್ದೇ (Mamata banerjee) ಸುದ್ದಿ.

[ccc_my_favorite_select_button post_id="121883"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]