
ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಸೋಮವಾರದ ಕೋವಿಡ್-19 ವರದಿಯಲ್ಲಿ ಜಿಲ್ಲೆಯ 12 ಜನರಿಗೆ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ ನೆಲಮಂಗಲ ಹಾಗೂ ಹೊಸಕೋಟೆ ತಾಲೂಕಿನಲ್ಲಿ ತಲಾ ಓರ್ವ ಪುರುಷ ಹಾಗೂ ಓರ್ವ ಮಹಿಳೆ ಸೇರಿದಂತೆ 4. ಮೂರು ಮಂದಿ ಪುರುಷರು ಮತ್ತು ಇಬ್ಬರು ಮಹಿಳೆಯರಿಗೆ ಸೇರಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 5. ದೇವನಹಳ್ಳಿ ತಾಲೂಕಿನಲ್ಲಿ ಇಬ್ಬರು ಪುರುಷರು ಮತ್ತು ಓರ್ವ ಮಹಿಳೆ ಸೇರಿ 3ಜನರಿಗೆ ಸೋಂಕು ದೃಢಪಟ್ಟಿದೆ.
ಪ್ರಸ್ತುತ ಜಿಲ್ಲೆಯಲ್ಲಿ 51 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 226ಕ್ಕೆ ಏರಿಕೆಯಾಗಿದ್ದರೆ, 8ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ಆರೋಗ್ಯ ಇಲಾಖೆಯಿಂದ ನಿರಂತರವಾಗಿ ತಪಾಸಣೆ ನಡೆಸಲಾಗುತ್ತಿದ್ದು, 521 ಮಂದಿಯ ಫಲಿತಾಂಶ ಬರಬೇಕಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

