
ಬೆಂಗಳೂರು: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಉತ್ತರಾಖಂಡ ರಾಜ್ಯದ ಡೆಹರಾಡೂನ್‌ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ 8 ನೇ ತರಗತಿ ಪ್ರವೇಶಕ್ಕಾಗಿ ಕರ್ನಾಟಕ ರಾಜ್ಯದ ಬಾಲಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಯುವಕರನ್ನು ದೇಶದ ಸಶಸ್ತ್ರ ಪಡೆಗೆ ಸೇರಲು ಸಿದ್ದಗೊಳಿಸುವುದು ಹಾಗೂ ಯುವಕರಿಗೆ ಸರ್ವ ರೀತಿಯ ವಿದ್ಯಾಭ್ಯಾಸ ಅಥವಾ ತರಬೇತಿ ನೀಡುವುದು ಈ ಸಂಸ್ಥೆಯ ಮುಖ್ಯ ಗುರಿಯಾಗಿದ್ದು, 7ನೇ ತರಗತಿಯಲ್ಲಿ ಉತ್ತೀರ್ಣರಾದ 13 ವರ್ಷದೊಳಗಿನ ಬಾಲಕ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನು ರಾಷ್ಟ್ರೀಯ ಭಾರತೀಯ ಮಿಲಿಟರಿ ಕಾಲೇಜು, ಗರಹಿ ಕ್ಯಾಂಟ್, ಡೆಹ್ರಾಡೂನ್, ಉತ್ತರಾಖಂಡ, ಪಿನ್-248004 ಮೂಲಕ ಪಡೆದು ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯ ಎರಡು ಪ್ರತಿಗಳನ್ನು ಏಪ್ರಿಲ್ 15ರೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನಿದೇರ್ಶಕರು, ಫೀಲ್ಡ್ ಮಾರ್ಷಲ್ ಕೆ.ಎಮ್ ಕಾರ್ಯಪ್ಪ ಭವನ ನಂ 59 ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಾಪ್ಪ ರಸ್ತೆ ಬೆಂಗಳೂರು-560025 ಈ ವಿಳಾಸಕ್ಕೆ ಸೂಕ್ತ ದಾಖಲಾತಿಗಳೊಂದಿಗೆ ಸಲ್ಲಿಸಬಹುದಾಗಿದೆ. ಅರ್ಹತಾ ಪರೀಕ್ಷೆ ಜೂನ್ 05 ರಂದು ಬೆಂಗಳೂರು ಕೇಂದ್ರದಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ 080-25589459 ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

