ಬೆಂ.ಗ್ರಾ.ಜಿಲ್ಲೆ: ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ, ಆರೋಗ್ಯ ಕ್ಷೇಮ ಕೇಂದ್ರಗಳ ಪ್ರಚಾರ ವಾಹನಕ್ಕೆ ಹಸಿರು ನಿಶಾನೆ ತೋರಿದ ಜಿಲ್ಲಾಧಿಕಾರಿ

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ದೊರೆಯುವ ಸೌಲಭ್ಯಗಳನ್ನು ಪ್ರಚಾರ ಮಾಡುವ ವಾಹನಕ್ಕೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್. ರವಿಕುಮಾರ್  ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮಾತನಾಡಿ, ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ  ಗರ್ಭಿಣಿ ಮತ್ತು ಮಗುವಿನ ಜನನ ಸಮಯದ ಸೇವೆಗಳು, ನವಜಾತ ಮತ್ತು ಶಿಶುವಿನ ಸಮಗ್ರ ಆರೋಗ್ಯ ಸೇವೆಗಳು, ಬಾಲ್ಯ ಮತ್ತು ಹದಿಹರೆಯದವರ ಸಮಗ್ರ ಆರೋಗ್ಯ ಸೇವೆಗಳು, ಕುಟುಂಬ ಕಲ್ಯಾಣ, ಗರ್ಭನಿರೋಧಕ ಸೇವೆಗಳು ಮತ್ತು ಇತರ ಸಂತಾನೋತ್ಪತ್ತಿ ಆರೋಗ್ಯ ಸೇವೆಗಳು, ರಾಷ್ಟ್ರೀಯ ಆರೋಗ್ಯ ಯೋಜನೆಗಳು ಹಾಗೂ ಸಾಂಕ್ರಾಮಿಕ ರೋಗಗಳ ನಿರ್ವಹಣೆ ಸೇವೆಗಳು, ಅಸಾಂಕ್ರಾಮಿಕ ರೋಗಗಳು (ಮಧುಮೇಹ, ಹೆಚ್ಚು ರಕ್ತದೊತ್ತಡ, ದೀರ್ಘಾವಧಿ ಶ್ವಾಸಕೋಶ ಕಾಯಿಲೆ, ಕೀಲು ನೋವು ಮತ್ತು ಸಂಧಿವಾತ, ಕ್ಯಾನ್ಸರ್-ಬಾಯಿ, ಸ್ತನ ಮತ್ತು ಗರ್ಭಕಂಠ ಕ್ಯಾನ್ಸರ್ ಗಳ ಸ್ಕ್ರೀನಿಂಗ್ ಸೇವೆಗಳು), ಮೂಲಭೂತ ನೇತ್ರ ಸೇವೆಗಳು, ಮೂಲಭೂತ ಕಿವಿ, ಮೂಗು, ಗಂಟಲು ಸೇವೆಗಳು, ಮೂಲಭೂತ ವೃದ್ಧಾಪ್ಯ  ಆರೈಕೆ, ಮಾನಸಿಕ ಆರೋಗ್ಯದ  ಮೂಲಭೂತ ಸ್ಕ್ರೀನಿಂಗ್ ಸೇವೆಗಳು, ಮೂಲಭೂತ ದಂತ  ಆರೋಗ್ಯ ಸೇವೆಗಳು, ಅಪಘಾತಗಳು ಹಾಗೂ ಗಾಯಾಳುಗಳಿಗೆ ಮೂಲಭೂತ ಮತ್ತು ಪ್ರಥಮ ಚಿಕಿತ್ಸೆ, ಆರೈಕೆ(ಹಾವು, ನಾಯಿ ಕಚ್ಚುವುದು, ಕತ್ತರಿಸಿದ, ಮತ್ತಿತರ ಗಾಯಗಳಿಗೆ ಪ್ರಥಮ ಚಿಕಿತ್ಸೆ) ಸೇವೆಗಳು ದೊರೆಯಲಿದ್ದು, ಸಾರ್ವಜನಿಕರು ಸೇವೆಗಳ ಸೌಲಭ್ಯ ಪಡೆಯಬೇಕೆಂದು ತಿಳಿಸಿದರು.

ಈ ವೇಳೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾ ದೇವಿ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟಮಾತನಾಡಿ, ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಇಂದು ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ನಿಖಿಲ್ ಕುಮಾರಸ್ವಾಮಿ ಸ್ವಾಗತಕ್ಕೆ ಸಜ್ಜು

ಇಂದು ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ನಿಖಿಲ್ ಕುಮಾರಸ್ವಾಮಿ ಸ್ವಾಗತಕ್ಕೆ ಸಜ್ಜು

ಇಂದು (ಮೇ.8) ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜೆಡಿಎಸ್ (JDS) ಪಕ್ಷದ 25 ನೇ ವರ್ಷದ ರಜತ ಮಹೋತ್ಸವ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಲಾಗುತ್ತಿದೆ.

[ccc_my_favorite_select_button post_id="121888"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]