ನೋಡಲ್ ಅಧಿಕಾರಿಗಳು ದಕ್ಷತೆಯಿಂದ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಕೆ‌.ಶ್ರೀನಿವಾಸ್ ಸೂಚನೆ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ಕೋವಿಡ್-19 ಎರಡನೇ ಅಲೆ ಹರಡುವಿಕೆಯನ್ನು ನಿಯಂತ್ರಿಸುವ ಸಲುವಾಗಿ  ನೋಡಲ್ ಅಧಿಕಾರಿಗಳಾಗಿ ನೇಮಕವಾದಂತಹ ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲ್ಲೂಕು, ಹೋಬಳಿ, ಗ್ರಾಮಗಳಿಗೆ ಭೇಟಿ ನೀಡಿ, ತಮಗೆ ವಹಿಸಿರುವ ಜವಾಬ್ದಾರಿಯನ್ನು ದಕ್ಷತೆಯಿಂದ ನಿಭಾಯಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ‌.ಶ್ರೀನಿವಾಸ್ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ “ಕೋವಿಡ್-19 ನಿಯಂತ್ರಣ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಕೋವಿಡ್ ಸೋಂಕಿತರಿಗೆ ಅಗತ್ಯವಿರುವ ಹಾಸಿಗೆ, ಆಕ್ಸಿಜನ್, ಔಷಧ, ಆಹಾರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಬೇಕು ಎಂದು ಸೂಚಿಸಿದರು.

ಈಗಾಗಲೇ ನಿಗದಿಪಡಿಸಿರುವ ಆಸ್ಪತ್ರೆಗಳಿಗೆ ನೋಡಲ್ ಅಧಿಕಾರಿಗಳು ಭೇಟಿ ನೀಡಿ, ಆಕ್ಸಿಜನ್ ಹಾಗೂ ರೆಮ್‌ಡಿಸಿವರ್ ಔಷಧಿ ಪೋಲಾಗದಂತೆ ಕ್ರಮ ಕೈಗೊಳ್ಳಬೇಕು ಎಂದರಲ್ಲದೆ, ಆಕ್ಸಿಜನ್ ಮತ್ತು ರೆಮ್‌ಡಿಸಿವರ್ ಔಷಧಿಯ ಕೃತಕ ಅಭಾವ ಸೃಷ್ಟಿಸಿ, ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿರುವುದು ಗಮನಕ್ಕೆ ಬಂದ ಕೂಡಲೇ,  ಅಂತವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಹಾಗೂ ಅಗತ್ಯವಿರುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲ್ಲೂಕು ಮಟ್ಟದಲ್ಲಿ ನಡೆಯುವ ಕೋವಿಡ್-19 ಸಂಬಂಧಿತ ಸಭೆಗಳಲ್ಲಿ ಪಾಲ್ಗೊಂಡು ಮಾಹಿತಿ ಪಡೆದುಕೊಳ್ಳಬೇಕು. ಕೋವಿಡ್ ಕೇರ್ ಸೆಂಟರ್‌ಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ವಾರಕ್ಕೊಮ್ಮೆ ಜಿಲ್ಲಾಧಿಕಾರಿಗಳಿಗೆ ವರದಿ ನೀಡಬೇಕು.

ಕೋವಿಡ್ ಸಾಂಕ್ರಾಮಿಕ ರೋಗದ ಕಠಿಣ ಸಂದರ್ಭದಲ್ಲಿ ಎಲ್ಲಾ ಅಧಿಕಾರಿಗಳು ಜವಾಬ್ದಾರಿಯಿಂದ ಹಾಗೂ ಸಹಕಾರದಿಂದ ಕೆಲಸ ನಿರ್ವಹಿಸಬೇಕು. ತಪ್ಪಿದಲ್ಲಿ, ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಅವರು ಮಾತನಾಡಿ, ಕೋವಿಡ್-19 ಎರಡನೇ ಅಲೆ ವೇಗವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವಾರು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅದರನ್ವಯ ಕೋವಿಡ್ ನಿಯಂತ್ರಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಹಲವು ಹಂತಗಳಲ್ಲಿ ತಂಡಗಳನ್ನು ರಚಿಸಲಾಗಿದ್ದು ನೋಡಲ್ ಅಧಿಕಾರಿಗಳು ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ತಂಡಗಳೊಂದಿಗೆ ಸಮನ್ವಯ ಸಾಧಿಸಿ, ಬೆಂಗಳೂರು ಗ್ರಾಮಾಂತರದಲ್ಲಿ ಕೋವಿಡ್-19 ಸೋಂಕನ್ನು ಹತೋಟಿ ತರುವ ಕೆಲಸ ಮಾಡಬೇಕು ಎಂದರು.

ಈಗಾಗಲೇ ನಗರ ಪ್ರದೇಶಗಳಿಂದ ಹಲವಾರು ಮಂದಿ ಗ್ರಾಮಾಂತರ ಪ್ರದೇಶಕ್ಕೆ ಮರಳುತ್ತಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿನ ತಂಡಗಳು ಅವರೆಲ್ಲರನ್ನು ಗುರುತಿಸಿ, ಮಾಹಿತಿ ಪಡೆದು, ಕೋವಿಡ್ ಪರೀಕ್ಷೆ ಮಾಡಿಸಬೇಕು ಎಂದರಲ್ಲದೆ, ಉದ್ಯೋಗ ಬಯಸುವವರಿಗೆ ನರೇಗಾ ಯೋಜನೆಯಡಿ ಜಾಬ್ ಕಾರ್ಡ್ ವಿತರಿಸಿ, ಉದ್ಯೋಗ ನೀಡಬೇಕು ಎಂದು ಈಗಾಗಲೇ ತಾಲ್ಲೂಕು ಕಾರ್ಯ ನಿರ್ವಾಹಣಾಧಿಕಾರಿಗಳಿಗೆ ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಅಧಿಕಾರಿಗಳು ತಾಲ್ಲೂಕು ಮಟ್ಟದಲ್ಲಿ ಕೋವಿಡ್ ನಿಯಂತ್ರಣಕ್ಕೆ ತಹಶೀಲ್ದಾರ್, ತಾಲ್ಲೂಕು ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ತಾಲ್ಲೂಕು ವೈದ್ಯಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. 2021ರ ಮೇ 01 ರಿಂದ ಆರಂಭವಾಗಲಿರುವ ಮೂರನೇ ಸುತ್ತಿನ ಲಸಿಕಾಕರಣವು 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡುವ ಉದ್ದೇಶ ಹೊಂದಲಾಗಿದ್ದು, ಲಸಿಕೆ ಪಡೆಯುವವರು ಕಡ್ಡಾಯವಾಗಿ ಆನ್‌ಲೈನ್ ನೋಂದಣಿ ಮಾಡಿಸಬೇಕು ಎಂದು ಹೇಳಿದರು.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರಲ್ಲದೆ, ಜಿಲ್ಲೆಯಲ್ಲಿ ಜನತಾ ಕರ್ಫ್ಯೂ ಜಾರಿಯಲ್ಲಿದ್ದು, ಕೃಷಿ, ತೋಟಗಾರಿಕೆಗೆ ಸಂಬಂಧಿಸಿದ ವಾಹನಗಳನ್ನು ಅನವಶ್ಯಕವಾಗಿ ತಡೆ ಹಿಡಿಯಬಾರದು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. 

ಈಗಾಗಲೇ ಮಳೆ ಪ್ರಾರಂಭವಾಗಿದ್ದು, ಕೈಗಾರಿಕೆಗಳು ತಮ್ಮ ತ್ಯಾಜ್ಯ, ವಿಷಪೂರಿತ ನೀರನ್ನು ಕೆರೆ, ಕುಂಟೆ, ಬಾವಿಗಳಿಗೆ ಬಿಡದಂತೆ ಸೂಕ್ತ ಕ್ರಮ ವಹಿಸಬೇಕು ಎಂದರು. 

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ,‌ ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಂಜುಳಾದೇವಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ಮಹೇಶ್.ಎನ್.ಎಸ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ಜೆಡಿಎಸ್ (JDS) ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಷ್ಟಾವಂತ ಕಾರ್ಯಕರ್ತರಿದ್ದರೆ ಚುನಾವಣೆಗಳನ್ನು ಗೆಲ್ಲುವುದು ಕಷ್ಟಸಾಧ್ಯವಲ್ಲ. ಈ ದಿಸೆಯಲ್ಲಿ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪಕ್ಷ ಸಂಘಟನೆಯನ್ನು ಸಮರ್ಪಕವಾಗಿ ಮಾಡಬೇಕು. ಕಾರ್ಯಕರ್ತರೊಡಗೂಡಿ ಪಕ್ಷ ಸಂಘಟನೆಗೆ

[ccc_my_favorite_select_button post_id="118326"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!