ಬೆಂ.ಗ್ರಾ.ಜಿಲ್ಲೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ / ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ “ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ಸಹಾಯ ಯೋಜನೆ” ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ” ಸೌಲಭ್ಯಕ್ಕಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 2021ರ ಮೇ 15 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ.
ಕೆಲವೊಂದು ವಿಶ್ವವಿದ್ಯಾನಿಲಯಗಳು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನೋಂದಣಿ ಸಂಖ್ಯೆಯನ್ನು ಒದಗಿಸಿರದ ಕಾರಣ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸಾಧ್ಯವಾಗಿರುವುದಿಲ್ಲ ಹಾಗೂ ಕೋವಿಡ್-19 ಸೋಂಕಿನ ಹಿನ್ನೆಲೆ 2021ರ ಮೇ 12 ವರೆಗೂ ರಾಜ್ಯಾದ್ಯಂತ ಲಾಕ್ಡೌನ್ ಘೋಷಿಸಿರುವ ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸಲು ಕೊನೆಯ ದಿನವನ್ನು ವಿಸ್ತರಿಸಲಾಗಿದೆ.
ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್ಸೈಟ್ www.bcwd.karnataka.gov.in ಅನ್ನು ಸಂಪರ್ಕಿಸಬಹುದು ಹಾಗೂ ವೆಬ್ಸೈಟ್ www.ssp.postmatric.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 2021ರ ಮೇ 15 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ.: 8050770005, 8050770004, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmetrichelpdesk@karnataka.gov.in, ಸಹಾಯವಾಣಿ ಸಂಖ್ಯೆ: 080-29787440 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಭವ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….