ಬೆಂ.ಗ್ರಾ.ಜಿಲ್ಲೆ: ಕೋವಿಡ್ ಎರಡನೇ ಅಲೆಯ ಅಪಾಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಇರುವ ಕೋವಿಡ್ ಕೇರ್ ಕೇಂದ್ರಗಳಿಗೆ ತಾಲ್ಲೂಕು ವ್ಯಾಪ್ತಿಯಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿರುವ ಕೋವಿಡ್ ಕೇರ್ ಸೆಂಟರ್ ಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ(ಮೊ.ಸಂ.: 9739567241)ಯನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.
ದೇವನಹಳ್ಳಿ ತಾಲ್ಲೂಕಿನಲ್ಲಿರುವ ಕೋವಿಡ್ ಕೇರ್ ಸೆಂಟರ್ ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧಿಕಾರಿ(ಮೊ.ಸಂ.: 9448743489), ನೆಲಮಂಗಲ ತಾಲ್ಲೂಕಿನಲ್ಲಿರುವ ಕೋವಿಡ್ ಕೇರ್ ಸೆಂಟರ್ ಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ(ಮೊ.ಸಂ.: 7975424876) ಹಾಗೂ ಹೊಸಕೋಟೆ, ತಾಲ್ಲೂಕಿನಲ್ಲಿರುವ ಕೋವಿಡ್ ಕೇರ್ ಸೆಂಟರ್ ಗೆ ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕ(ಮೊ.ಸಂ.:9482322548) ರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.
ನೋಡಲ್ ಅಧಿಕಾರಿಗಳು ಆಯಾ ತಾಲ್ಲೂಕುಗಳಿಗೆ ಸಂಬಂಧಪಟ್ಟ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲ್ಲೂಕು ಹಿಂದುಳಿದ ಕಲ್ಯಾಣಾಧಿಕಾರಿಗಳು, ತಾಲ್ಲೂಕು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ತಾಲ್ಲೂಕು ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ, ಸಮನ್ವಯದೊಂದಿಗೆ ತಂಡಗಳನ್ನು ಆಯಾ ತಾಲೂಕಿನಲ್ಲಿ ರಚಿಸಿ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಯಾವುದೇ ರೀತಿ ತೊಂದರೆಯಾಗದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸೂಕ್ತ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….