ಬೆಂ.ಗ್ರಾ.ಜಿಲ್ಲೆ: ಮಾರುಕಟ್ಟೆಯಲ್ಲಿ ಬೇಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ರೆಮ್ಡಿಸಿವಿರ್ ದಾಸ್ತಾನು ಇರುವುದರಿಂದ ಮತ್ತು ರೋಗಿಗಳಿಗೆ ಔಷಧವು ತಕ್ಷಣ ಲಭ್ಯವಾಗುವಂತೆ ನೋಡಿಕೊಳ್ಳುವ ಸಲುವಾಗಿ ಕೆ.ಪಿ.ಎಂ.ಇ ಪೋರ್ಟಲ್‌ನಲ್ಲಿ ಆಸ್ಪತ್ರೆಗಳಿಂದ ಆನ್ಲೈನ್ ಇಂಡೆಂಟ್ ಪಡೆದು ರೆಮ್ಡಿಸಿವಿರ್ ಹಂಚಿಕೆ ಮಾಡುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಲ್ಲಿಸಲಾಗಿದ್ದು, ಆಸ್ಪತ್ರೆಯವರು/ ಸಾರ್ವಜನಿಕರು ರೆಮ್ಡಿಸಿವಿರ್ ಇಂಜೆಕ್ಷನ್‌ನ್ನು ಔಷಧ ವಿತರಕರಿಂದ ನಿಯಮಾನುಸಾರ ನೇರವಾಗಿ ಪಡೆಯಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.
ಎಲ್ಲಾ ಔಷಧ ವಿತರಕರು ರೆಮ್ಡಿಸಿವಿರ್, ತಯಾರಕಾ ಸಂಸ್ಥೆಗಳಿಂದ ನಿಯಮಾನುಸಾರ ಪಡೆದು, ಮಾರಾಟ ಮಾಡಲು ಸೂಚಿಸಲಾಗಿದ್ದು, ಯಾವುದೇ ಸಂಸ್ಥೆಯವರು ಔಷಧ ಬೆಲೆ ನಿಯಂತ್ರಣ ಆದೇಶ ಉಲ್ಲಂಘಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದಾಗಲೀ ಅಥವಾ ಔಷಧ ಮತ್ತು ಕಾಂತಿವರ್ಧಕ ಅಧಿನಿಯಮ ಮತ್ತು ಅದರಲ್ಲಿನ ನಿಯಮಾವಳಿಗಳನ್ನು ಉಲ್ಲಂಘಿಸಿ ಮಾರಾಟ ಮಾಡಿದ್ದಲ್ಲಿ, ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಂಗ್ರಹ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….