ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದ ಅನ್ನದಾಸೋಹ ಪರಿಶೀಲಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರು / ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ವಿಫಲವೆಂದ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ

ದೊಡ್ಡಬಳ್ಳಾಪುರ: ಬಿಜೆಪಿ ಸರ್ಕಾರದಲ್ಲಿ ಎರಡು ವರ್ಷದಿಂದ ಅಭಿವೃದ್ಧಿ ಕೆಲಸ ಮಾಡದೇ ಸಚಿವರು, ಶಾಸಕರು ಕಿತ್ತಾಡುವುದೇ ಕೆಲಸವಾಗಿದ್ದು, ಕರೊನಾ ಎರಡನೇ ಅಲೆಯನ್ನು ನಿರ್ವಹಣೆ ಮಾಡುವಲ್ಲಿ ಸರ್ಕಾರ ಸಂಪುರ್ಣವಾಗಿ ವಿಫಲವಾಗಿದೆ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.

ನಗರದಲ್ಲಿ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ವಿವಿಧ ಕೈಗಾರಿಕೋದ್ಯಮಿಗಳು ಹಾಗು ದಾನಿಗಳ ಸಹಕಾರದಿಂದ ನಡೆಯುತ್ತಿರುವ ಅನ್ನ ದಾಸೋಹ ವೀಕ್ಷಿಸಲು ಆಗಮಿಸಿದ್ದ ಅವರು ಸುದ್ಧಿಗಾರರೊಂದಿಗೆ ಮಾತನಾಡಿದರು.

ಮೊದಲನೇ ಅಲೆಯಲ್ಲಿ ಸಾಕಷ್ಟು ಅನುಭವಿದ್ದ ತಜ್ಞರು, ವೈದ್ಯರು ಎಚ್ಚರಿಕೆ ನೀಡಿದರೂ ಯಾವುದೇ ರೀತಿಯಲ್ಲಿ ಮುನ್ನೆಚ್ಚರಿಕೆ ವಹಿಸದೆ ಕರೊನಾ ನಿರ್ವಹಣೆಯಲ್ಲಿ ವಿಫಲವಾಯಿತು. ಎರಡನೇ ಅಲೆಯ ಮನ್ನೆಚ್ಚರಿಕೆಗಳನ್ನು ಸಹ ಗಂಭೀರವಾಗಿ ಪರಿಗಣಿಸಿಲ್ಲ. ಕಳೆದ ವರ್ಷದ ಒಂದು ಬೆಡ್‍ಗಳಲ್ಲಿ ಒಂದೂ  ಕೂಡ ಹೆಚ್ಚಿಗೆ ಮಾಡುವ ವ್ಯವಸ್ಥೆ ಮಾಡಿರಲಿಲ್ಲ. ಕಾಳಸಂತೆಯಲ್ಲಿ ರೆಮ್‍ಡಿಸಿವರ್, ಆಮ್ಲಜನಕ ಮಾರುವಂತ ದುಸ್ಥಿತಿ ಎದುರಾಗಿದೆ. ಸೋಂಕಿತ ಸಂಖ್ಯೆ ಏರಿಕೆ ಹಾಗೂ ನಿರುದ್ಯೋಗ ವಿಚಾರದಲ್ಲಿ  ಪ್ರಧಾನಿ ನರೇಂದ್ರ ಮೋದಿ ಜಗತ್ತಿಗೇ ನಂಬರ್ 1 ಆಗಿದ್ದಾರೆ ಎಂದರು.

ಬಿಜೆಪಿ ಸರ್ಕಾರದಲ್ಲಿ ಅಧಿಕಾರಿಗಳು ಕೂಡ ಮುಖ್ಯಮಂತ್ರಿಗಳ ಮಾತುಗಳನ್ನು ಕೇಳುತ್ತಿಲ್ಲ. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಮಾಡುವುದು ಬಿಡುವುದು ಅವರ ಆಂತರಿಕ ವಿಚಾರ. ಬಿಎಸ್ ಯಡಿಯೂರಪ್ಪ ಕೂಡ ಅಷ್ಟು ಸುಲಭವಾಗಿ ಅಕಾರ ಬಿಟ್ಟು ಕೊಡಲ್ಲ. ಅವರ ಬದಲಾವಣೆಗೆ ಅವರ ಪಕ್ಷದಲ್ಲಿಯೇ ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಮಾತನಾಡಿ, ಕೋವಿಡ್ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ಸರಿಯಾಗಿ ನಿಭಾಯಿಸುತ್ತಿಲ್ಲ. ಜನರು ಸಂಕಷ್ಟದ ಸಮಯದಲ್ಲಿರುವಾಗ ಮುಖ್ಯಮಂತ್ರಿ ನಾಯಕತ್ವ ಬದಲಾವಣೆ ಚರ್ಚೆ ನಡೆಯುತ್ತಿರುವುದು ದುರ್ದೈವದ ಸಂಗತಿ. ರಾಜ್ಯ ಸಂಕಷ್ಟದಲ್ಲಿರುವಾಗ ಬಿಜೆಪಿ ನಾಯಕರು ಅಕಾರಕ್ಕಾಗಿ ಹಾತೊರೆಯುತ್ತಿರುವುದು ಸೂಕ್ತವಲ್ಲ. ಕೊವಿಡ್ ಸಂಕಷ್ಟದಲ್ಲಿರುವವರಿಗೆ ನೆರವಾಗುವುದು ಅವರಿಗೆ ಆಹಾರ ನೀಡುತ್ತಿರುವುದು ಅಭಿನಂದನೀಯವಾಗಿದ್ದು, ಕೊವಿಡ್ ಸಂಕಷ್ಟವನ್ನು ಎದುರಿಸಲು ಕಾಂಗ್ರೆಸ್ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದರು.

ಈ ವೇಳೆ ಶಾಸಕ ವೆಂಕಟರಮಣಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಂಚೂಣಿ ಘಟಕದ ಮುಖಂಡರು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಆದಿಚುಂಚನಗಿರಿಯಲ್ಲಿ ವಿಜ್ಜಾನಿ ಡಾ. ಸೂರಪ್ಪ ಅವರಿಗೆ ‘ವಿಜ್ಞಾತಂ 2026’ ಪ್ರಶಸ್ತಿ ಪ್ರಧಾನ

ಆದಿಚುಂಚನಗಿರಿಯಲ್ಲಿ ವಿಜ್ಜಾನಿ ಡಾ. ಸೂರಪ್ಪ ಅವರಿಗೆ ‘ವಿಜ್ಞಾತಂ 2026’ ಪ್ರಶಸ್ತಿ ಪ್ರಧಾನ

ಅಭಿವೃದ್ಧಿಯಲ್ಲಿ ರಾಜಕೀಯ ಬೆರೆಸುವ ಅಗತ್ಯವಿಲ್ಲ. ಪರಸ್ಪರ ಟೀಕೆ, ದೋಷಾರೋಪ ಮಾಡಿಕೊಳ್ಳುವ ಅಗತ್ಯವೂ ಇಲ್ಲ. ನಾವೆಲ್ಲರೂ ಸೇರಿ ಮಂಡ್ಯ ಜಿಲ್ಲೆಯನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯೋಣ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="119645"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!