ಕೋವಿಡ್ ಸೋಂಕಿನ ಪ್ರಮಾಣ ಗಣನೀಯ ಇಳಿಕೆ: ಬಿ.ಎನ್.ಬಚ್ಚೇಗೌಡ

ಬೆಂ.ಗ್ರಾ.ಜಿಲ್ಲೆ: ರಾಜ್ಯಾದ್ಯಂತ ಲಾಕ್‌ಡೌನ್ ಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದ ಪರಿಣಾಮ ರಾಜ್ಯ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಬಿ.ಎನ್. ಬಚ್ಚೇಗೌಡ ತಿಳಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕೋವಿಡ್ ಪರಿಕರಗಳನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿ ಅವರು ಮಾತನಾಡಿ ಕೋವಿಡ್ ಸೋಂಕಿನ ಪ್ರಮಾಣ  ಇಳಿಕೆ ಆಗುತ್ತಿರುವ ಹಿನ್ನೆಲೆ, ಹಂತ ಹಂತವಾಗಿ ಲಾಕ್‌ಡೌನ್ ತೆರವುಗೊಳಿಸಬೇಕು ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಕೋವಿಡ್ ಸ್ಥಿತಿಯ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದ್ದು, ಜಿಲ್ಲೆಯಲ್ಲಿ ಆಕ್ಸಿಜನ್, ಬೆಡ್ ಹಾಗೂ ಲಸಿಕೆಯ ಯಾವುದೇ ಸಮಸ್ಯೆ ಇಲ್ಲ‌ ಎಂದರು. 

ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವೈದ್ಯರು, ಸಿಬ್ಬಂದಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಕರೋನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ ಹಾಗೂ ಮಾಧ್ಯಮಗಳು ಸಹ  ಜನರಲ್ಲಿ  ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 1075 ಕಂದಾಯ ಗ್ರಾಮಗಳಿದ್ದು, ಸೋಂಕಿತರಲ್ಲಿ ಹೆಚ್ಚಿನ ಜನರು ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಈ ಹಿನ್ನೆಲೆ, ಹೋಂ‌ ಐಸೋಲೇಷನ್ ‌ನಲ್ಲಿದ್ದ ಜನರನ್ನು ವಿಲೇಜ್ ಟಾಸ್ಕ್ ಪೋರ್ಸ್ ಮೂಲಕ ಮನವೊಲಿಸಿ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಿ ಅವರ ಆರೋಗ್ಯ ಸುಧಾರಿಸುವ ಕೆಲಸವಾಗುತ್ತಿದೆ ಎಂದರಲ್ಲದೆ, ಕೋವಿಡ್ ಕೇರ್ ಸೆಂಟರ್ ನಲ್ಲಿನ‌ ಹೆಚ್ಚಿನ ಜನರು ಕೋವಿಡ್ ಮೆಡಿಕಲ್ ಕಿಟ್ ಬಳಸುವ ಮೂಲಕ ಗುಣಮುಖರಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ತಿಳಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ಅಧಿಕಾರಿಗಳೊಂದಿಗೆ ಚರ್ಚಿಸಿ, ದೇವನಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ 20, ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ 10, ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ 10 ಹಾಗೂ ಹೊಸಕೋಟೆ ತಾಲ್ಲೂಕು ಆಸ್ಪತ್ರೆಗೆ 05 ಒಟ್ಟಾರೆಯಾಗಿ ಜಿಲ್ಲೆಗೆ 45 ಆಕ್ಸಿಜನ್ ಕಾನ್ಸನ್ ಟ್ರೇಟರ್ ನೀಡಲಾಗಿದೆ ಎಂದು ಮಾಹಿತಿ ನೀಡಿದರು. 

ಜಿಲ್ಲಾಡಳಿತದಿಂದ ಇದುವರೆಗೂ 20 ಸಾವಿರ  ಮೆಡಿಕಲ್ ಕಿಟ್ ವಿತರಣೆ ಮಾಡಲಾಗಿದೆ ಎಂದರು. ಅಲ್ಲದೆ, ಪ್ರತೀ ತಾಲ್ಲೂಕಿನಲ್ಲಿ 6 ರಂತೆ ಒಟ್ಟು 24 ಆಂಬ್ಯುಲೆನ್ಸ್ ಗಳು ಕಾರ್ಯನಿರ್ವಹಿಸುತ್ತಿವೆ ಎಂದರು. ಕೋವಿಡ್ ಎರಡನೇ ಅಲೆ ಹರಡುವಿಕೆಯನ್ನು ತಡೆಯಲು ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಎಲ್ಲರಿಗೂ ಉಚಿತ ಲಸಿಕೆ ಘೋಷಣೆ ಮಾಡಿರುವುದರಿಂದ ಕೋವಿಡ್ ಮೂರನೇ ಅಲೆ ತಡೆಯಲು ಸಹಕಾರಿಯಾಗಲಿದೆ.

ಕೋವಿಡ್ ಮೂರನೇ ಅಲೆ ತಡೆಯಲು ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲೂ 50 ಹಾಸಿಗೆಯ ಸಾಮರ್ಥ್ಯವುಳ್ಳ 4 ಕೋವಿಡ್ ಕೇರ್ ಸೆಂಟರ್ ಗಳು ಹಾಗೂ ವಿಕಲಚೇತನ ಮಕ್ಕಳಿಗೆ ಪ್ರತ್ಯೇಕ ಎರಡು ಕೇರ್ ಸೆಂಟರ್ ತೆರೆಯಲಾಗಿದೆ ಎಂದು ತಿಳಿಸಿದರು. 

ಕೋವಿಡ್ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ ಎಂದು ಈಗಾಗಲೇ ವೈದ್ಯರು ತಿಳಿಸಿದ ಹಿನ್ನೆಲೆ, 1 ರಿಂದ 6 ವರ್ಷ ಹಾಗೂ 6 ರಿಂದ 18 ವರ್ಷದ ಮಕ್ಕಳನ್ನು ಪ್ರತ್ಯೇಕವಾಗಿ ಆರೈಕೆ ಮಾಡುವಂತೆ ಸೂಚಿಸಲಾಗಿದ್ದು, ಅದರಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಮಕ್ಕಳಲ್ಲಿ ಕೋವಿಡ್ ಹರಡುವಿಕೆಯನ್ನು ತಡೆಯಲು ಎಲ್ಲರೂ ಮುಂದಾಗಬೇಕು ಹಾಗೂ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಾಗದಂತೆ ಕ್ರಮ ಕೈಗೊಳ್ಳಬೇಕು ಎಂದರು.

ನೆಲಮಂಗಲ ತಾಲ್ಲೂಕಿನ ಸಿದ್ದಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಮಕ್ಕಳಿಗಾಗಿ 40 ಬೆಡ್ ಮೀಸಲಿರಿಸಲಾಗಿದ್ದು, ಹತ್ತು ವೆಂಟಿಲೇಟರ್ ಗಳ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿಸಿದರು. 

ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರು ಮಾತನಾಡಿ, ಸಂಸದರು 2 ಸಾವಿರ ಕೋವಿಡ್ ಮೆಡಿಕಲ್ ಕಿಟ್ ಹಾಗೂ 2 ಸಾವಿರ ಮಾಸ್ಕ್ ಗಳನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.

ಈ ವೇಳೆ ಅಪರ ಜಿಲ್ಲಾಧಿಕಾರಿ ಡಾ. ಜಗದೀಶ.ಕೆ.ನಾಯಕ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರಾಜ್ಯದ 1,082 ನಗರಾಭಿವೃದ್ಧಿ ಯೋಜನೆಗಳ ಪ್ರಸ್ತಾವನೆ ಕೇಂದ್ರಕ್ಕೆ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದ 1,082 ನಗರಾಭಿವೃದ್ಧಿ ಯೋಜನೆಗಳ ಪ್ರಸ್ತಾವನೆ ಕೇಂದ್ರಕ್ಕೆ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ನಮ್ಮ ರಾಜ್ಯದ ಎಲ್ಲಾ ನಗರಗಳಿಗೂ ಸೇರಿ ₹5 ಸಾವಿರ ಕೋಟಿ ಹಣ ಮೀಸಲಿಟ್ಟಿದ್ದಾರೆ. ಇದಕ್ಕೆ ಕೆಲವು ಮಾನದಂಡ ನಿಗದಿ ಮಾಡಿದ್ದು, ನಮ್ಮ ರಾಜ್ಯದಿಂದ 1,082 ಯೋಜನೆಗಳ ಪ್ರಸ್ತಾವನೆ ಅವರ ಮುಂದೆ ಇರಿಸಿದ್ದೇವೆ: ಡಿ.ಕೆ. ಶಿವಕುಮಾರ್

[ccc_my_favorite_select_button post_id="121389"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ (Tempo) ಡಿವೈಡರ್ ಮೇಲೆ ಸಾಗಿ, ಮತ್ತೊಂದು ರಸ್ತೆಯಲ್ಲಿ ಎದುರು ಬರುತ್ತಿದ್ದ ಟ್ಯಾಂಕರ್ಗೆ (Canter) ಡಿಕ್ಕಿ ಹೊಡೆದ ಪರಿಣಾಮ (Accident), ಟೆಂಪೋ ಚಾಲಕ ಸಾವನಪ್ಪಿರುವ ಘಟನೆ ತಾಲೂಕಿ ಕೂಗೇನಹಳ್ಳಿ ಕಾಲೋನಿ

[ccc_my_favorite_select_button post_id="121396"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]