ದೊಡ್ಡಬಳ್ಳಾಪುರ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 10,000 ಗಿಡ ನೆಡುವ ಕಾರ್ಯಕ್ರಮಕ್ಕೆ ತಾಲ್ಲೂಕಿನ ಮಾಕಳಿದುರ್ಗ ಬೆಟ್ಟದಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಿ ಡಾ.ಶಾಲಿನಿ ರಜಿನೀಶ್ ಹಾಗೂ ಲೋಕೋಪಯೋಗಿ ಇಲಾಖೆ ಹಾಗೂ ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳು ರಜನೀಶ್ ಗೋಯಲ್ ಅವರು ಸಾಂಕೇತಿಕವಾಗಿ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳ ಮುಖಾಂತರ ಸಸಿ ನೆಡುವ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಅರಣ್ಯಾಧಿಕಾರಿ ಆಂತೋನಿ ಮರಿಯಪ್ಪ, ಉಪವಿಭಾಗಾಧಿಕಾರಿ ಅರುಳ್ ಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ತಹಶೀಲ್ದಾರ್ ಟಿ.ಎಸ್.ಶಿವರಾಜ್ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..