ಫಾಸ್ಫೇಟ್‌ಯುಕ್ತ ರಸಗೊಬ್ಬರದಲ್ಲಿ ಆತ್ಮನಿರ್ಭರವಾಗಲಿರುವ ಭಾರತ / ಕರ್ನಾಟಕದಲ್ಲಿ ಪೊಟ್ಯಾಸಿಕ್ ಅದಿರಿನ ಶೋಧನೆ ತ್ವರಿತಗೊಳಿಸಿ: ಮನ್ಸುಖ್ ಮಾಂಡವಿಯಾ

ನವದೆಹಲಿ: ಫಾಸ್ಪೇಟ್ ಯುಕ್ತ ಅಥವಾ ಫಾಸ್ಫಾಟಿಕ್ ರಸಗೊಬ್ಬರಗಳ (ಡಿಎಪಿ ಮತ್ತು ಎನ್‌ಪಿಕೆ) ಲಭ್ಯತೆಯನ್ನು ಸುಧಾರಿಸುವ ಸಲುವಾಗಿ ಮತ್ತು ರಸಗೊಬ್ಬರಗಳಲ್ಲಿ ಭಾರತವನ್ನು ನೈಜವಾಗಿ ಸ್ವಾವಲಂಬಿ ಮಾಡುವ ಮೂಲಕ ಆಮದಿನ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ, ರಸಗೊಬ್ಬರ ಕೈಗಾರಿಕೆಗಳ ಮಧ್ಯಸ್ಥಗಾರೊಂದಿಗೆ ರಾಸಾಯನಿಕ ಮತ್ತು ರಸಗೊಬ್ಬರಗಳ ಖಾತೆ ಸಹಾಯಕ ಸಚಿವ ಮನ್ಸುಖ್ ಮಾಂಡವಿಯಾ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮಾಂಡವಿಯಾ ಅವರು, “ಡಿಎಪಿ ಮತ್ತು ಎನ್‌ಪಿಕೆ ರಸಗೊಬ್ಬರಗಳ ಪ್ರಮುಖ ಕಚ್ಚಾ ವಸ್ತುವಾದ ರಾಕ್ ಫಾಸ್ಫೇಟ್‌ನಲ್ಲಿ ಭಾರತವನ್ನು ಸ್ವಾವಲಂಬಿ ಮಾಡಲು ರಸಗೊಬ್ಬರ ಇಲಾಖೆ ಕ್ರಿಯಾ ಯೋಜನೆಯೊಂದಿಗೆ ಸಿದ್ಧವಾಗಿರುವುದು ನನಗೆ ಸಂತಸ ತಂದಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಮೊಳಗಿಸಿದ ‘ಆತ್ಮನಿರ್ಭರ ಭಾರತ್’ ಕರೆಯನ್ನುಅನುಸರಿಸುವ ಮೂಲಕ, ಭಾರತ ಮುಂದಿನ ದಿನಗಳಲ್ಲಿ ರಸಗೊಬ್ಬರಗಳಲ್ಲಿ ಸ್ವಾವಲಂಬನೆ ಸಾಧಿಸುವತ್ತ ದಿಟ್ಟ ಹೆಜ್ಜೆ ಇಡುತ್ತಿದೆ,ʼʼ ಎಂದರು.

ಸ್ಥಳೀಯ ಸಂಪನ್ಮೂಲಗಳ ಬಳಕೆ ಮೂಲಕ ರಸಗೊಬ್ಬರ ಉತ್ಪಾದನೆಯಲ್ಲಿ ಭಾರತವನ್ನು ಸ್ವಾವಲಂಬಿಯಾಗಿಸಲು ಕ್ರಿಯಾ ಯೋಜನೆಯನ್ನು ರೂಪಿಸಲಾಯಿತು. ರಾಜಸ್ಥಾನ, ದಕ್ಷಿಣ ಭಾರತದ ಮಧ್ಯಭಾಗ, ಹಿರಾಪುರ (ಮಧ್ಯ ಪ್ರದೇಶ), ಲಲಿತ್‌ಪುರ (ಉ.ಪ್ರದೇಶ), ಮುಸ್ಸೂರಿ ಶಿಲಾಪದರ, ಕಡಪ ಅಚ್ಚುಕಟ್ಟು ಪ್ರದೇಶದಲ್ಲಿ (ಆಂಧ್ರ ಪ್ರದೇಶ) ಲಭ್ಯವಿರುವ ಫಾಸ್ಪೋರೈಟ್ ನಿಕ್ಷೇಪಗಳನ್ನು ವಾಣಿಜ್ಯ ಉದ್ದೇಶದಿಂದ ಮತ್ತಷ್ಟು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಸದ್ಯ ಭಾರತದಲ್ಲಿರುವ 30 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸುವಂತೆ ಮಾಂಡವಿಯಾ ನಿರ್ದೇಶನ ನೀಡಿದರು.

ರಾಜಸ್ಥಾನದ ಸತಿಪುರ, ಭರುಸಾರಿ ಮತ್ತು ಲಖಾಸರ್ ಹಾಗೂ ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್, ಆಂಧ್ರಪ್ರದೇಶ ಮತ್ತು ಕರ್ನಾಟಕದಲ್ಲಿ ಇರಬಹುದಾದ ಪೊಟ್ಯಾಸಿಕ್ ಅದಿರಿನ ಸಂಪನ್ಮೂಲಗಳ ಶೋಧನೆಯನ್ನು ತ್ವರಿತಗೊಳಿಸಲು ಸಲುವಾಗಿ ಭಾರತದ ಗಣಿಗಾರಿಕೆ ಮತ್ತು ಭೂವೈಜ್ಞಾನಿಕ ಸಮೀಕ್ಷೆ ಇಲಾಖೆಯೊಂದಿಗೆ ಚರ್ಚೆ ಮತ್ತು ಯೋಜನೆ ನಡೆಸಲಾಗುತ್ತಿದೆ. ಸಂಭಾವ್ಯ ನಿಕ್ಷೇಪಗಳ ಗಣಿಗಾರಿಕೆಯನ್ನು ಆದಷ್ಟು ಬೇಗ ಪ್ರಾರಂಭಿಸಲು ಎಲ್ಲಾ ಇಲಾಖೆಗಳು ಜಂಟಿಯಾಗಿ ಕೆಲಸ ಮಾಡುತ್ತಿವೆ. ವಿದೇಶದಿಂದ ದುಬಾರಿ ಕಚ್ಚಾವಸ್ತುವಿನ ಆಮದು ಕಡಿಮೆ ಮಾಡಲು ಆ ಮೂಲಕ ಕೈಗೆಟುಕುವ ದರದಲ್ಲಿ ಎಲ್ಲ ರೈತರಿಗೂ ರಸಗೊಬ್ಬರ ಲಭ್ಯವಾಗುವಂತೆ ಮಾಡಲು ಕೈಗೊಳ್ಳಬೇಕಾದ ಕ್ರಮಗಳೂ ಸಹ ಕ್ರಿಯಾ ಯೋಜನೆಯಲ್ಲಿ ಸೇರಿವೆ.

ಡಿಎಪಿ ಮತ್ತು ಎನ್‌ಪಿಕೆ ರಸಗೊಬ್ಬರಗಳಿಗೆ ರಾಕ್ ಫಾಸ್ಫೇಟ್ ಪ್ರಮುಖ ಕಚ್ಚಾ ವಸ್ತುವಾಗಿದೆ. ಪ್ರಸ್ತುತ ಭಾರತವು ಇದಕ್ಕಾಗಿ 90% ಆಮದನ್ನು ಅವಲಂಬಿಸಿದೆ. ಅಂತಾರಾಷ್ಟ್ರೀಯ ಬೆಲೆಗಳಲ್ಲಿನ ಏರಿಳಿತವು ಗೊಬ್ಬರಗಳ ದೇಶೀಯ ಬೆಲೆಗಳ ಮೇಲೆ ಪರಿಣಾಮ ಬೀರುತ್ತವೆ ಹಾಗೂ ದೇಶದ ಕೃಷಿ ಕ್ಷೇತ್ರದ ಪ್ರಗತಿ ಮತ್ತು ಅಭಿವೃದ್ಧಿಗೆ ಇದರಿಂದ ಅಡ್ಡಿಯಾಗುತ್ತದೆ. ಆದ್ದರಿಂದ, ಭಾರತದಲ್ಲಿ ಲಭ್ಯವಿರುವ ರಾಕ್ ಫಾಸ್ಫೇಟ್ ನಿಕ್ಷೇಪಗಳ ಶೋಧನೆ ಮತ್ತು ಗಣಿಗಾರಿಕೆಯನ್ನು ತ್ವರಿತಗೊಳಿಸಲು ಮಂಡವಿಯಾ ಮಧ್ಯಸ್ಥಗಾರರೊಂದಿಗೆ ಸಭೆ ನಡೆಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ ಹೆಸರುಗಳಿವೆ: ಸಿಎಂ ಸಿದ್ದರಾಮಯ್ಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ

ಬಿಜೆಪಿಯವರು ಪ್ರಚೋದನಾ ಕಾರಿಯಾದ ಭಾಷಣ ಮಾಡಿದರೆ ಏನು ಮಾಡಬೇಕು? ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: Cmsiddaramaiah

[ccc_my_favorite_select_button post_id="113856"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

[ccc_my_favorite_select_button post_id="113787"]
ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ಅಪ್ರಾಪ್ತ ಬಾಲಕಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದ ಪಾಲನಜೋಗಿಹಳ್ಳಿಯಲ್ಲಿ ನಡೆದಿದೆ

[ccc_my_favorite_select_button post_id="113869"]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ

ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="113840"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!