ಬೆಂ.ಗ್ರಾ.ಜಿಲ್ಲೆ: ಜಿಲ್ಲಾ ತಂಬಾಕು ನಿಯಂತ್ರಣದ ಘಟಕದ ವತಿಯಿಂದ ದೊಡ್ಡಬಳ್ಳಾಪುರ ಪಟ್ಟಣದ ರೈಲು ನಿಲ್ದಾಣದ ಸುತ್ತ ಮುತ್ತಲಿನ ವಿವಿಧ ಅಂಗಡಿ, ಮುಂಗಟ್ಟುಗಳ ಮೇಲೆ ಕಾರ್ಯಾಚರಣೆ ನಡೆಸಿ, ಒಂದು ವಾರದೊಳಗೆ ತಂಬಾಕು ಉತ್ಪನ್ನಗಳ ಮಾರಾಟ ನಿಷಿದ್ಧದ ಕುರಿತ ನಾಮಫಲಕ ಅಳವಡಿಸುವಂತೆ ಸೂಚನೆ ನೀಡಲಾಯಿತು.
ಇದೇ ಸಂದರ್ಭದಲ್ಲಿ ಕೋಟ್ಪಾ ಕಾಯ್ದೆ ಕುರಿತು ಅರಿವು ಮೂಡಿಸಲಾಯಿತು.
ಕಾರ್ಯಾಚರಣೆ ವೇಳೆ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಸಲಹೆಗಾರ್ತಿ ಡಾ.ವಿದ್ಯಾರಾಣಿ, ಸಾಮಾಜಿಕ ಕಾರ್ಯಕರ್ತ ಸಂಪತ್‌ಕುಮಾರ್, ಹಿರಿಯ ಆರೋಗ್ಯ ಆರಕ್ಷಕ ನಿರೀಕ್ಷಕ ಕರಿಯಪ್ಪ, ಹೆಡ್ ಕಾನ್ಸಟೇಬಲ್ ಪ್ರಸನ್ನ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..