ಎರಡು ವರ್ಷವಾದರೂ ದೊಡ್ಡಬಳ್ಳಾಪುರ ನಗರಸಭೆಗಿಲ್ಲ ಚುನಾವಣೆ ಭಾಗ್ಯ…..!

ದೊಡ್ಡಬಳ್ಳಾಪುರ: ಕರೊನಾ ಹಿನ್ನಲೆಯಲ್ಲಿ ಅವಧಿ ಮುಗಿದಿರುವ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ, ನಗರಸಭೆ ಸೇರಿದಂತೆ ಯಾವುದೇ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಡಿಸೆಂಬರ್ ವರಗೆ  ನಡೆಸದಿರಲು ರಾಜ್ಯ ಸರ್ಕಾರ ಸೂಚಿಸಿದೆ. ಈ ಹಿನ್ನಲೆಯಲ್ಲಿ ದೊಡ್ಡಬಳ್ಳಾಪುರ ನಗರಸಭೆ ಚುನಾವಣೆ ಸಹ ಮುಂದೂಡಲಾಗಿದ್ದು ಚುನಾವಣೆ ಅಗತ್ಯತೆ ಬಗ್ಗೆ ಒತ್ತಡಗಳ ಕೇಳಿ ಬರುತ್ತಿವೆ.

ಅವಧಿ ಮುಕ್ತಾಯವಾಗಿ ಎರಡು ವರ್ಷ: ಐದು ವರ್ಷಗಳ ಅವಧಿಯ ನಗರಸಭೆ ಸದಸ್ಯರ ಅಧಿಕಾರ ಅವಧಿ 2019ರ ಮಾ.12ರ ಸಂಜೆ ಮುಕ್ತಾಯವಾಗಿ, ನಗರಸಭೆ ಈಗ ಆಡಳಿತಾಧಿಕಾರಿಗಳ ಸುಬರ್ದಿನಲ್ಲಿದೆ. 2 ವರ್ಷ 3 ತಿಂಗಳಾಗಿದ್ದರೂ ಇನ್ನೂ ಚುನಾವಣೆ ಭಾಗ್ಯವಿಲ್ಲ. ಈಗ ನಗರಸಭೆ ಚುನಾವಣೆ ಮುಂದೂಡಿರುವುದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆ ಹೊಂದಿದ್ದ ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ.

ವಾರ್ಡ್ ಮೀಸಲಾತಿ ತಕರಾರು: ವಾರ್ಡ್‍ಗಳ ಗಡಿ ನಿಗದಿ, ವಾರ್ಡ್‍ಗಳ ಮೀಸಲಾತಿ ಅಂತಿಮಗೊಳಿಸಿದ್ದರೂ ಸಹ ಇದು ಸರಿ ಇಲ್ಲ ಎನ್ನುವುದನ್ನು ಪ್ರಶ್ನಿಸಿ ಕೆಲವರು ನ್ಯಾಯಾಲಯದ ಮೊರೆಹೋದ ಕಾರಣದಿಂದಾಗಿ ನಗರಸಭಾ ಚುನಾವಣೆ ವಿಳಂಬವಾಗುತ್ತಲೇ ಬರುತ್ತಿದೆ. ಮೂರು ತಿಂಗಳ ಹಿಂದೆಯಷ್ಟೇ ನ್ಯಾಯಾಲಯದ ಆದೇಶದಂತೆ ವಾರ್ಡ್‍ಗಳ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಚುನಾವಣೆ ದಿನಾಂಕ ಘೋಷಣೆಯಾಗುವ ಹಂತದಲ್ಲಿ ಇರುವಾಗಲೇ ಮತ್ತೊಮ್ಮೆ ವಾರ್ಡ್‍ಗಳ ಮೀಸಲಾತಿ ನಿಗದಿಯನ್ನು ಪ್ರಶ್ನಿಸಿ ಜಿ.ಎಸ್.ಸೋಮರುದ್ರ ಶರ್ಮ ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಇದೆಲ್ಲವು ಇತ್ಯರ್ಥವಾಗಿ ಚುನಾವಣಾ ದಿನಾಂಕ ಪ್ರಕಟವಾಗುತ್ತದೆ ಎನ್ನುವಷ್ಟರಲ್ಲಿ ಮತ್ತೊಮ್ಮೆ ಲಾಕ್‍ಡೌನ್ ಜಾರಿಗೆ ಬಂತು. ಇದರ ಬೆನ್ನಲ್ಲೆ ಸರ್ಕಾರದ ಆದೇಶ ಹೊರಬಿದ್ದಿರುವುದು ಚುನಾವಣೆಗಾಗಿ ಸಂಘಟನೆಯಲ್ಲಿ ನಿರತರಾಗಿದ್ದ ಆಕಾಂಕ್ಷಿಗಳಲ್ಲಿ ಬೇಸರ ಮೂಡಿಸಿದೆ.

ಈ ನಡುವೆ ಸರ್ಕಾರ ಹಾಗೂ ವಾರ್ಡ್ ಮೀಸಲಾತಿ ತಕರಾರು ಸಲ್ಲಿಸಿರುವ ಅರ್ಜಿದಾರರ ವಿಚಾರಣೆಗಳು ವಿಳಂಬವಾಗುತ್ತಿದೆ. ಸರ್ಕಾರದ ಪರವಾಗಿ ಸರಿಯಾಗಿ ತಮ್ಮ ನಿಲುವು ಸಮರ್ಥಿಸುವ ಕಡೆ ಗಮನ ನೀಡುತ್ತಿಲ್ಲ ಎನ್ನುವ ಆರೋಪಗಳು ಕೇಳಿ ಬರುತ್ತಿದ್ದು, ವಿಚಾರಣೆ ತ್ವರಿತವಾಗಿ ನಡೆದು ತೀರ್ಪು ಹೊರಬೀಳಬೇಕಿದೆ ಎನ್ನುವುದು ರಾಜಕೀಯ ಮುಖಂಡರ ಅಭಿಪ್ರಾಯವಾಗಿದೆ.

ಉದ್ಘಾಟನೆಗೆ ಕಾಯುತ್ತಿದೆ ಹೊಸ ಕಾರ್ಯಾಲಯ: ನಗರಸಭೆಯ ಆವರಣದಲ್ಲಿ 4.5 ಕೋಟಿ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ನಗರಸಭೆಯ ಕಾರ್ಯಾಲಯ ಬಹುತೇಕ ಪೂರ್ಣವಾಗಿದೆ. ಆದರೆ ಇದಕ್ಕೆ ಇನ್ನೂ ಉದ್ಘಾಟನಾ ಭಾಗ್ಯವಿಲ್ಲ. ಎಲ್ಲಾ ಸರಿಯಾಗಿದ್ದರೆ ಕಟ್ಟಡ ಉದ್ಘಾಟನೆಯಾಗಬೇಕಿತ್ತು. ಡಿಸೆಂಬರ್ ನಂತರ ಚುನಾವಣೆ ನಡೆದರೆ ಮಾರ್ಚ್ ವೇಳೆಗೆ ನಗರಸಭೆ ಅವಧಿ ಮುಗಿದು 3 ವರ್ಷವಾಗುತ್ತದೆ. ಮುಂದಿನ ನೂತನ ನಗರಸಭಾ ಸದಸ್ಯರು ಹೊಸ ಕಟ್ಟಡದಲ್ಲಿಯೇ ತಮ್ಮ ಸಭೆಗಳನ್ನು ನಡೆಸಬಹುದಾಗಿದೆ.

ನಗರಸಭೆ ಚುನಾವಣೆ ನಡೆಸುವುದು ಸೂಕ್ತವಾಗಿದ್ದು, ನ್ಯಾಯಾಲಯದಲ್ಲಿರುವ ಆಕ್ಷೇಪಣೆಗಳು  ಶೀಘ್ರ ಬಗೆಹರಿದು ಚುನಾವಣೆ ಶೀಘ್ರ ಪ್ರಕಟವಾಗಲಿ ಎಂದು ರಾಜಕೀಯ ಮುಖಂಡರ ಹಾಗೂ ನಾಗರಿಕರ ಅಭಿಪ್ರಾಯವಾಗಿದೆ.

ನಗರಸಭೆಯ ವಾರ್ಡ್‍ಗಳ ಗಡಿ ನಿಗದಿ, ವಾರ್ಡ್‍ಗಳ ಮೀಸಲಾತಿ ಅಂತಿಮಗೊಳಿಸಲಾಗಿದ್ದರೂ, ಕೆಲವರು ನ್ಯಾಯಾಲಯದ ಮೊರೆ ಹೋಗಿರುವುದರಿಂದ, ಪ್ರಕರಣ ಇತ್ಯರ್ಥವಾದ ನಂತರ ನಿಯಮಾನುಸಾರ ಚುನಾವಣೆ ನಡೆಯಲಿದೆ. ನಗರಸಭೆ ಕಾರ್ಯಾಲಯದ ಕಟ್ಟಡ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಒಳಾಂಗಣದ ಕಾಮಗಾರಿಗಳು ಬಾಕಿ ಇವೆ: ರಮೇಶ್.ಎಸ್.ಸುಣಗಾರ್ ಪೌರಾಯುಕ್ತ, ನಗರಸಭೆ

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಸಿಎಂ ಡಿ.ಕೆ.

“ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ಕರ್ನಾಟಕ ಸರ್ಕಾರವು ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ. ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡುವ ಭರವಸೆ ಇದೆ” ಎಂದು ಡಿಸಿಎಂ ಡಿ.ಕೆ.

[ccc_my_favorite_select_button post_id="119395"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!