ವಿದ್ಯಾರ್ಥಿಗಳಲ್ಲಿ ಕೌಶಲ್ಯವನ್ನು ಹೆಚ್ಚಿಸಲು ಬಿಸಿಐಸಿ-ಎಸ್‌ಡಿಎಂ ನೋಡಲ್‌ ಸೆಂಟರ್‌ಗಳು ಸಹಕಾರಿ: ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌

ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಉದ್ಯೋಗಕ್ಕೆ ಹಾಗೂ ಸ್ವಯಂ ಉದ್ಯಮ ಪ್ರಾರಂಭಕ್ಕೆ ಅಗತ್ಯವಿರುವ ಕೌಶಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಬೆಂಗಳೂರು ಛೇಂಬರ್ಸ್‌ ಆಫ್‌ ಇಂಡಸ್ಟ್ರಿ ಅಂಡ್‌ ಕಾಮರ್ಸ್‌ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು ಜಂಟಿಯಾಗಿ ಮೈಸೂರು ಮತ್ತು ಧಾರವಾಡದಲ್ಲಿ ಪ್ರಾರಂಭಿಸುತ್ತಿರುವ ಸೆಂಟರ್‌ ಫಾರ್‌ ಎಕ್ಸಲೆನ್ಸ್‌ ಇನ್‌ ಮ್ಯಾನೇಜ್‌ಮೆಂಟ್ ಬಹಳ ಸಹಕಾರಿ ಆಗಲಿವೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದರು.

ಇಂದು ಬೆಂಗಳೂರಿನಲ್ಲಿ ಮೈಸೂರು ಮತ್ತು ಧಾರವಾಡದ ನೂತನ ಬಿಸಿಐಸಿ-ಎಸ್‌ಡಿಎಂ ಸೆಂಟರ್‌ ಫಾರ್‌ ಎಕ್ಸಲೆನ್ಸ್‌ ಇನ್‌ ಮ್ಯಾನೇಜ್‌ಮೆಂಟ್‌ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಇಂಡಸ್ಟ್ರಿಯ ಅಗತ್ಯಕ್ಕೆ ತಕ್ಕಂತಹ ಕೌಶಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಇಂದು ಉದ್ಘಾಟಿಸಲಾಗಿರುವ ಬಿಸಿಐಸಿ-ಎಸ್‌ಡಿಎಂ ನೋಡಲ್‌ ಸೆಂಟರ್‌ ಗಳು ಬಹಳ ಪರಿಣಾಮಕಾರಿಯಾಗಲಿವೆ. ಈ ಎಕ್ಸಲೆನ್ಸ್‌ ಸೆಂಟರ್‌ಗಳ ಮೂಲಕ ವಿದ್ಯಾರ್ಥಿಗಳು ಉದ್ಯೋಗಕ್ಕೆ ಸೇರುವ ಮುನ್ನವೇ ಉದ್ಯೋಗದ ಅನುಭವ ಮತ್ತು ಮಾಹಿತಿಯನ್ನು ಪಡೆದುಕೊಳ್ಳಲಿದ್ದಾರೆ.

ಬೆಂಗಳೂರು ಛೇಂಬರ್ಸ್‌ ಆಫ್‌ ಕಾಮರ್ಸ್‌ ನ ಅನುಭವಿ ಉದ್ಯಮಿಗಳು ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ದಿ, ಹೊಸ ಸಂಶೋಧನೆ ಹಾಗೂ ಸ್ವಂತ ಉದ್ಯಮವನ್ನು ಬೆಳೆಸುವ ತರಬೇತಿಯನ್ನು ನೀಡಲಿರುವುದು ಸಂತಸದ ವಿಷಯವಾಗಿದೆ. ಇಂತಹ ಪ್ರಯತ್ನವನ್ನು ರಾಜ್ಯದ ಇತರೆ ಭಾಗಗಳಿಗೂ ವಿಸ್ತರಿಸಲು ಎರಡೂ ಸಂಸ್ಥೆಗಳು ಮುಂದಾಗಲಿ ಎಂದು ಹೇಳಿದರು. 

ಬೆಂಗಳೂರು ಛೇಂಬರ್ಸ್‌ ಆಫ್‌ ಇಂಡಸ್ಟ್ರಿ ಅಂಡ್‌ ಕಾಮರ್ಸ್‌ ಕರೊನಾ ಸಾಂಕ್ರಾಮಿಕ ರೋಗ ಹೆಚ್ಚಾಗಿದ್ದಾಗ ರಾಜ್ಯ ಸರಕಾರದ ಜೊತೆಯಲ್ಲಿ ಕೈಜೋಡಿಸಿ ಹಲವಾರು ಕೊಡುಗೆಗಳನ್ನು ನೀಡಿತು. ಸಂಕಷ್ಟದ ಸಮಯದಲ್ಲಿ ಸರಕಾರ ಮತ್ತು ಉದ್ಯಮಿಗಳ ಮಧ್ಯೆ ಸೇತುವೆಯಾಗಿ ಕಾರ್ಯನಿರ್ವಹಿಸಿದ ಬಿಸಿಐಸಿ ಅವರ ಕಾರ್ಯ ಶ್ಲಾಘನೀಯ. ರಾಜ್ಯ ದೇಶದ ಪ್ರಮುಖ ಬಂಡವಾಳ ಹೂಡಿಕೆಯ ತಾಣವಾಗಿ ಹೊರಹೊಮ್ಮಿದೆ. ಇದನ್ನ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯವ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು. 

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ, ಬೆಂಗಳೂರು ಛೇಂಬರ್ಸ್‌ ಆಫ್‌ ಇಂಡಸ್ಟ್ರಿ ಅಂಡ್‌ ಕಾಮರ್ಸ್‌ನ ಅಧ್ಯಕ್ಷರಾದ ಟಿ.ಆರ್‌ ಪರಶುರಾಮನ್‌, ಹಿರಿಯ ಉಪಾಧ್ಯಕ್ಷರಾದ ಕೆ.ಆರ್‌ ಶೇಖರ್‌, ಉಪಾಧ್ಯಕ್ಷರಾದ ಡಾ ರವೀಂದ್ರನ್‌, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇನ್ಸಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ ಮೈಸೂರಿನ ನಿರ್ದೇಶಕ ಡಾ.ಎನ್‌.ಆರ್‌.ಪರಶುರಾಮನ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಪ್ರಧಾನಮಂತ್ರಿ ಬದಲಾವಣೆಗೆ ಬಿಜೆಪಿಯವರು ಮಾತಾಡುತ್ತಿದ್ದಾರೆ; ಬಾಂಬ್ ಸಿಡಿಸಿದ ಸಂತೋಷ್ ಲಾಡ್

ಪ್ರಧಾನಮಂತ್ರಿ ಬದಲಾವಣೆಗೆ ಬಿಜೆಪಿಯವರು ಮಾತಾಡುತ್ತಿದ್ದಾರೆ; ಬಾಂಬ್ ಸಿಡಿಸಿದ ಸಂತೋಷ್ ಲಾಡ್

ಕೇಂದ್ರ ಸರ್ಕಾರದ ಫಾರಿನ್ ಪಾಲಿಸಿ ಫೇಲ್ ಆಗಿದ್ದು ಬಿಜೆಪಿಗರು ಒಳಗೊಳಗೆ ಪ್ರಧಾನಮಂತ್ರಿ ಬದಲಾಗಬೇಕೆಂದು ಮಾತಾಡುತ್ತಿದ್ದಾರೆ; ಸಚಿವ ಸಂತೋಷ್ ಲಾಡ್ (Santhosh Lad)

[ccc_my_favorite_select_button post_id="110374"]
ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಆದ್ಯತೆ; ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="110133"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!