ನಾವು ನಮ್ಮ ಮಾತೃ ಭಾಷೆಯೊಂದಿಗೆ ಹೊಕ್ಕುಳಬಳ್ಳಿಯ ಸಂಬಂಧವನ್ನು ಹಂಚಿಕೊಂಡಿದ್ದೇವೆ: ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು

ನವದೆಹಲಿ: ಎಂಟು ರಾಜ್ಯಗಳ 14 ಎಂಜಿನಿಯರಿಂಗ್ ಕಾಲೇಜುಗಳು ಪ್ರಾದೇಶಿಕ ಭಾಷೆಗಳಲ್ಲಿ ಕೋರ್ಸ್‌ಗಳನ್ನು ನೀಡಲು ಮುಂದಾಗಿರುವುದನ್ನು ಶ್ಲಾಘಿಸಿದ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು, ಹೆಚ್ಚಿನ ಶಿಕ್ಷಣ ಸಂಸ್ಥೆಗಳು ಅದರಲ್ಲೂ ವಿಶೇಷವಾಗಿ ತಾಂತ್ರಿಕ ಮತ್ತು ವೃತ್ತಿಪರ ಶಿಕ್ಷಣ ನೀಡುವ ಸಂಸ್ಥೆಗಳು ಇದೇ ಹಾದಿಯನ್ನು ಅನುಸರಿಸಬೇಕೆಂದು ಮನವಿ ಮಾಡಿದ್ದಾರೆ.

ಪ್ರಾದೇಶಿಕ ಭಾಷೆಗಳಲ್ಲಿ ಕೋರ್ಸ್‌ಗಳನ್ನು ಒದಗಿಸುವುದು ವಿದ್ಯಾರ್ಥಿಗಳ ಪಾಲಿಗೆ ವರದಾನವಾಗಲಿದೆ ಎಂದು ಅವರುಪ್ರತಿಪಾದಿಸಿದರು. ಈ ಕುರಿತು ತಮ್ಮ ಉತ್ಕಟ ಬಯಕೆಯನ್ನು ವ್ಯಕ್ತಪಡಿಸಿದ ನಾಯ್ಡು ಅವರು, “ಎಂಜಿನಿಯರಿಂಗ್, ವೈದ್ಯಕೀಯ ಮತ್ತು ಕಾನೂನಿನಂತಹ ಎಲ್ಲಾ ವೃತ್ತಿಪರ ಕೋರ್ಸ್‌ಗಳನ್ನು ಮಾತೃ ಭಾಷೆಗಳಲ್ಲಿ ಕಲಿಸುವ ದಿನವನ್ನು ನೋಡುವುದು ನನ್ನ ಬಯಕೆಯಾಗಿದೆ” ಎಂದು ಹೇಳಿದರು.

11 ಭಾಷೆಗಳಲ್ಲಿ ಪ್ರಕಟಿಸಲಾದ ‘ಮಾತೃ ಭಾಷೆಯಲ್ಲಿ ಎಂಜಿನಿಯರಿಂಗ್ ಕೋರ್ಸ್‌ಗಳು-ಸರಿಯಾದ ದಿಕ್ಕಿನಲ್ಲಿ ಒಂದು ಹೆಜ್ಜೆ’ ಎಂಬ ಶೀರ್ಷಿಕೆಯ ಫೇಸ್‌ಬುಕ್ ಪೋಸ್ಟ್‌ನಲ್ಲಿ ಉಪ ರಾಷ್ಟ್ರಪತಿಗಳು – ಹಿಂದಿ, ಮರಾಠಿ, ತಮಿಳು, ತೆಲುಗು, ಕನ್ನಡ, ಗುಜರಾತಿ, ಮಲಯಾಳಂ, ಬೆಂಗಾಳಿ, ಅಸ್ಸಾಮಿ, ಪಂಜಾಬಿ ಮತ್ತು ಒಡಿಯಾ – ಈ 11 ಸ್ಥಳೀಯ ಭಾಷೆಗಳಲ್ಲಿ ಬಿ.ಟೆಕ್‌ ಕೋರ್ಸ್‌ಗಳನ್ನು ನೀಡಲು ಅನುಮತಿಸಿದ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ (ಎಐಸಿಟಿಇ) ನಿರ್ಧಾರದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಹೊಸ ಶೈಕ್ಷಣಿಕ ವರ್ಷದಿಂದ ಆಯ್ದ ಶಾಖೆಗಳಲ್ಲಿ ಪ್ರಾದೇಶಿಕ ಭಾಷೆಗಳಲ್ಲಿ  ಕೋರ್ಸ್‌ಗಳನ್ನು ಒದಗಿಸಲು ಎಂಟು ರಾಜ್ಯಗಳ 14 ಎಂಜಿನಿಯರಿಂಗ್ ಕಾಲೇಜುಗಳು ಕೈಗೊಂಡಿರುವ ನಿರ್ಧಾರವನ್ನೂ ಅವರು ಸ್ವಾಗತಿಸಿದ್ದಾರೆ. “ಇದು ಸರಿಯಾದ ದಿಕ್ಕಿನಲ್ಲಿ ಒಂದು ಹೆಜ್ಜೆ ಎಂದು ನಾನು ಬಲವಾಗಿ ನಂಬುತ್ತೇನೆ.” ಎಂದಿದ್ದಾರೆ.

ಮಾತೃ ಭಾಷೆಯಲ್ಲಿ ಕಲಿಕೆಯ ಪ್ರಯೋಜನಗಳನ್ನು ಉಲ್ಲೇಖಿಸಿದ ಉಪರಾಷ್ಟ್ರಪತಿಯವರು, ಇದು ವ್ಯಕ್ತಿಯ ಗ್ರಹಿಕೆ ಮತ್ತು ತಿಳಿವಳಿಕೆಯ ಮಟ್ಟವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು. “ಯಾವುದೇ ವಿಷಯವನ್ನು ಬೇರೆ ಭಾಷೆಯಲ್ಲಿ  ಅರ್ಥ ಮಾಡಿಕೊಳ್ಳಬೇಕಾದರೆ, ಮೊದಲು ಆ ವ್ಯಕ್ತಿಯು  ಆ ಭಾಷೆಯನ್ನು ಕಲಿಯಬೇಕು ಮತ್ತು ಕರಗತ ಮಾಡಿಕೊಳ್ಳಬೇಕು. ಅದಕ್ಕೆ ಸಾಕಷ್ಟು ಪ್ರಯತ್ನದ ಬೇಕಾಗುತ್ತದೆ. ಆದರೆ, ಒಬ್ಬ ವ್ಯಕ್ತಿ ಮಾತೃಭಾಷೆಯಲ್ಲೇ ಆ ವಿಷಯವನ್ನು ಕಲಿಯುವಾಗ ಇಷ್ಟೆಲ್ಲಾ ಕಸರತ್ತು ಅಗತ್ಯವಿರುವುದಿಲ್ಲ,” ಎಂದು ಅವರು ಹೇಳಿದರು.

ನಮ್ಮ ದೇಶದ ಶ್ರೀಮಂತ ಭಾಷಾ ಮತ್ತು ಸಾಂಸ್ಕೃತಿಕ ಪರಂಪರೆಯ ಬಗ್ಗೆ ಒತ್ತಿ ಹೇಳಿದ ಉಪ ರಾಷ್ಟ್ರಪತಿಯವರು, ಭಾರತವು ನೂರಾರು ಭಾಷೆಗಳು ಮತ್ತು ಸಾವಿರಾರು ಉಪಭಾಷೆಗಳಿಗೆ ನೆಲೆಯಾಗಿದೆ ಎಂದರು. “ನಮ್ಮ ಭಾಷಾ ವೈವಿಧ್ಯತೆಯು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಮೂಲಾಧಾರಗಳಲ್ಲಿ ಒಂದಾಗಿದೆ” ಎಂದು ಅವರು ಹೇಳಿದರು.

ಮಾತೃ ಭಾಷೆಯ ಮಹತ್ವವನ್ನು ಒತ್ತಿ ಹೇಳಿದ ಶ್ರೀ ನಾಯ್ಡು ಅವರು “ನಮ್ಮ ಮಾತೃ ಭಾಷೆ ಅಥವಾ ನಮ್ಮ ಸ್ಥಳೀಯ ಭಾಷೆ ನಮಗೆ ಬಹಳ ವಿಶೇಷವಾಗಿದೆ, ಏಕೆಂದರೆ ನಾವು ಅದರೊಂದಿಗೆ ಹೊಕ್ಕುಳಬಳ್ಳಿಯ ಸಂಬಂಧವನ್ನು ಹಂಚಿಕೊಂಡಿದ್ದೇವೆ,” ಎಂದು ಹೇಳಿದರು.

ಪ್ರತಿ ಎರಡು ವಾರಗಳಿಗೊಮ್ಮೆ ವಿಶ್ವದ ಒಂದು ಭಾಷೆ ಅಳಿದುಹೋಗುತ್ತಿದೆ ಎಂಬ ವಿಶ್ವಸಂಸ್ಥೆಯ ವರದಿಯನ್ನು ಉಲ್ಲೇಖಿಸಿದ ಶ್ರೀ ನಾಯ್ಡು, ಭಾರತದಲ್ಲಿ 196 ಭಾರತೀಯ ಭಾಷೆಗಳು ಅಳಿವಿನಂಚಿನಲ್ಲಿವೆ ಎಂದು ಕಳವಳ ವ್ಯಕ್ತಪಡಿಸಿದರು. “ನಮ್ಮ ಸ್ಥಳೀಯ ಭಾಷೆಗಳನ್ನು ರಕ್ಷಿಸಲು ಮತ್ತು ಮಾತೃಭಾಷೆಯಲ್ಲಿ ಕಲಿಕೆಯನ್ನು ಉತ್ತೇಜಿಸಲು ಬಹುಮುಖಿ ವಿಧಾನವನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ” ಎಂದು ಅವರು ಹೇಳಿದರು.

ಜನರು ಸಾಧ್ಯವಾದಷ್ಟು ಹೆಚ್ಚಿನ ಸಂಖ್ಯೆಯ ಭಾಷೆಗಳನ್ನು ಕಲಿಯಬೇಕೆಂದು ಶ್ರೀ ನಾಯ್ಡು ಕರೆ ನೀಡಿದರು. ವಿವಿಧ ಭಾಷೆಗಳಲ್ಲಿನ ಪ್ರಾವೀಣ್ಯವು ಇಂದಿನ ಪರಸ್ಪರ ಸಂಪರ್ಕಿತ ಜಗತ್ತಿನಲ್ಲಿ ಹೆಚ್ಚಿನ ಪ್ರಯೋಜನ ಒದಗಿಸುತ್ತದೆ ಎಂದು ಅವರು ಹೇಳಿದರು. “ನಾವು ಪ್ರತಿಯೊಂದು ಭಾಷೆಯನ್ನು ಕಲಿತಂತೆ, ಅದರ ಸಂಸ್ಕೃತಿಯೊಂದಿಗೆ ನಮ್ಮ ಸಂಪರ್ಕ ಆಳವಾಗುತ್ತಾ ಹೋಗುತ್ತದೆ,ʼʼ ಎಂದು ಅವರು ಹೇಳಿದರು.

ಭಾಷೆಗಳನ್ನು ರಕ್ಷಿಸಲು ಸರಕಾರ ಕೈಗೊಂಡಿರುವ ಕ್ರಮಗಳನ್ನು ಉಪ ರಾಷ್ಟ್ರಪತಿಗಳು ಶ್ಲಾಘಿಸಿದರು. ಹೊಸ ಶಿಕ್ಷಣ ನೀತಿಯು ಸಾಧ್ಯವಿರುವೆಡೆಯೆಲ್ಲಾ ಕನಿಷ್ಠ 5ನೇ ತರಗತಿಯವರೆಗೆ ಮತ್ತು ಆದ್ಯತೆಯ ಮೇರೆಗೆ 8ನೇ ತರಗತಿ ಮತ್ತು ಅದರಾಚೆಗೂ ಮಾತೃಭಾಷೆ/ಸ್ಥಳೀಯ ಭಾಷೆ/ಪ್ರಾದೇಶಿಕ ಭಾಷೆ/ಮನೆ ಭಾಷೆಯಲ್ಲಿ ಶಿಕ್ಷಣ ನೀಡಲು ಪ್ರೋತ್ಸಾಹಿಸುತ್ತದೆ ಎಂದು ಗಮನ ಸೆಳೆದರು. ಶಿಕ್ಷಣದ ಆರಂಭಿಕ ಹಂತಗಳಲ್ಲಿ ಮಾತೃಭಾಷೆಯಲ್ಲಿ ಬೋಧನೆಯು ಮಗುವಿನ ಸ್ವಾಭಿಮಾನವನ್ನು ಹೆಚ್ಚಿಸುತ್ತದೆ ಮತ್ತು ಅವನ ಅಥವಾ ಅವಳ ಸೃಜನಶೀಲತೆಯನ್ನು ಹೆಚ್ಚಿಸುತ್ತದೆ ಎಂದು ವಿಶ್ವದಾದ್ಯಂತ ಅನೇಕ ಅಧ್ಯಯನಗಳು ಸಾಬೀತುಪಡಿಸಿವೆ ಎಂದು ಅವರು ಹೇಳಿದರು.

ಅಳಿವಿನಂಚಿನಲ್ಲಿರುವ ಅಥವಾ ಮುಂದಿನ ದಿನಗಳಲ್ಲಿ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇರುವ ಭಾಷೆಗಳನ್ನು ದಾಖಲಿಸುವ ಮತ್ತು ಸಂಗ್ರಹಿಸುವ ಉದ್ದೇಶದ ಶಿಕ್ಷಣ ಸಚಿವಾಲಯ ಆರಂಭಿಸಿರುವ ʻಅಳಿವಿನಂಚಿನಲ್ಲಿರುವ ಭಾಷೆಗಳ ರಕ್ಷಣೆ ಮತ್ತು ಸಂರಕ್ಷಣೆ (ಎಸ್ ಪಿಪಿಇಎಲ್) ಯೋಜನೆʼಯನ್ನು  ನಾಯ್ಡು ಶ್ಲಾಘಿಸಿದರು.

ಸರಕಾರವೊಂದೇ ನಿರೀಕ್ಷಿತ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ಉಪರಾಷ್ಟ್ರಪತಿ ಹೇಳಿದರು. “ನಮ್ಮ ಭವಿಷ್ಯದ ಪೀಳಿಗೆಗೆ ಈ ಸಂಪರ್ಕ ಕೊಂಡಿಯನ್ನು ಬಲಪಡಿಸುವ ನಿಟ್ಟಿನಲ್ಲಿ ನಮ್ಮ ಸುಂದರ ಭಾಷೆಗಳನ್ನು ರಕ್ಷಿಸಲು ಜನರ ಪಾಲ್ಗೊಳ್ಳುವಿಕೆ ನಿರ್ಣಾಯಕವಾಗಿದೆ” ಎಂದು ಅವರು  ಅಭಿಪ್ರಾಯಪಟ್ಟರು. ತಮ್ಮ ಮಾತೃಭಾಷೆಯಲ್ಲಿ ಸಂವಹನ ನಡೆಸಲು ಜನರಲ್ಲಿಇರುವ ಹಿಂಜರಿಕೆಯ ಬಗ್ಗೆ ಗಮನ ಸೆಳೆದ  ನಾಯ್ಡು ಅವರು, ಜನರು ತಮ್ಮ ಮಾತೃಭಾಷೆಯಲ್ಲಿ ಮನೆಯಲ್ಲಿ ಮಾತ್ರವಲ್ಲದೆ ಸಾಧ್ಯವಿರುವ ಎಲ್ಲಾ ಕಡೆ ಮಾತನಾಡುವಂತೆ ಮನವಿ ಮಾಡಿದರು. “ವ್ಯಾಪಕವಾಗಿ ಬಳಸಿದಾಗ ಮಾತ್ರ ಭಾಷೆಗಳು ಅಭಿವೃದ್ಧಿ ಹೊಂದುತ್ತವೆ ಮತ್ತು ಬದುಕುಳಿಯುತ್ತವೆ” ಎಂದು ಅವರು ಪ್ರತಿಪಾದಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ. ಸುರೇಶ್

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ. ಸುರೇಶ್

"ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ (ಡಿ.ಕೆ. ಶಿವಕುಮಾರ್) ಸಿಎಂ ಆಗುತ್ತಾರೆ. ಹಣೆಬರಹ ಇಲ್ಲ ಎಂದರೆ ಯಾರೂ ಏನೂ ಮಾಡಲು ಆಗುವುದಿಲ್ಲ" ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ (D.K. Suresh) ಅವರು ತಿಳಿಸಿದರು.

[ccc_my_favorite_select_button post_id="119818"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!