ದೊಡ್ಡಬಳ್ಳಾಪುರ: ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ, ನಗರದ ಪ್ರತಿಷ್ಠಿತ ಎಂಎಸ್ ವಿ ಶಾಲೆ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದೆ.
ಈ ಕುರಿತು ಹರಿತಲೇಖನಿಯೊಂದಿಗೆ ಮಾತನಾಡಿದ MSV ಶಾಲೆಯ ಆಡಳಿತ ಮಂಡಳಿ ಮುಖ್ಯಸ್ಥರಾದ ಎ.ಸುಬ್ರಮಣ್ಯ ಸುಶಿಕ್ಷಿತ, ಸಜ್ಜನ ರಾಜಕಾರಣಿ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿ ಪಟ್ಟ ದೊರೆತಿರುವುದು ಉತ್ತಮ ಬೆಳವಣಿಗೆಯಾಗಿದೆ. ಶಿಕ್ಷಣ ಕ್ಷೇತ್ರದ ಬಗ್ಗೆ ಹೆಚ್ಚಿನ ಮಾಹಿತಿಯುಳ್ಳ ವ್ಯಕ್ತಿಯಾದ ಬೊಮ್ಮಾಯಿ ಅವರು ಶಿಕ್ಷಣ ಕ್ಷೇತ್ರ ಹೆಚ್ಚಿನ ಒತ್ತು ನೀಡುವ ವಿಶ್ವಾಸವಿದೆ ಎಂದರು.
ಇತ್ತೀಚೆಗೆ ನಮ್ಮ ಶಾಲೆಯ ಕಾರ್ಯಕ್ರಮವೊಂದರಲ್ಲಿ ಹಲವು ಗಂಟೆಗಳ ಕಾಲ ಅವರೊಂದಿಗೆ ಕಳೆದಿದ್ದು, ಬೊಮ್ಮಾಯಿ ಅವರಿಗೆ ಶಿಕ್ಷಣದ ಬಗ್ಗೆ ಇರುವ ಕಾಳಜಿ ತಿಳಿಯಲು ಸಹಕಾರಿಯಾಗಿತೆಂದು ಸುಬ್ರಮಣ್ಯ ಸ್ಮರಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..