ದೊಡ್ಡಬಳ್ಳಾಪುರ: ಅಂತಾರಾಜ್ಯ ಸರಗಳ್ಳರ ಬಂಧನದ ಕುರಿತಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಂದು ಪತ್ರಿಕಾಗೋಷ್ಠಿ ನಡೆಸುವ ಸಿದ್ದತೆಯ ನಡುವೆಯೇ, ಗುರುವಾರ ರಾತ್ರಿ ತಾಲೂಕಿನ ಸಾಸಲು ಗ್ರಾಮದಲ್ಲಿ ದುಷ್ಕರ್ಮಿಗಳು ಮಹಿಳೆಯೋರ್ವರ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ವರದಿಯಾಗಿದೆ.
ಸಾಸಲು ಗ್ರಾಮದ ಗ್ರಂಥಾಲಯ ಸಮೀಪದ ಚಿಲ್ಲರೆ ಅಂಗಡಿಗೆ ವ್ಯಾಪಾರ ನಡೆಸುವ ಸೋಗಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು, ಅಂಗಡಿಯಲ್ಲಿದ ಮಹಿಳೆಯ ಕುತ್ತಿಗೆಯಲ್ಲಿನ ಸುಮಾರು 1ಲಕ್ಷ 80 ಸಾವಿರ ಮೌಲ್ಯದ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಕೊರಟಗೆರೆ ಮಾರ್ಗದಿಂದ ಕಪ್ಪು ಬಣ್ಣದ ಪಲ್ಸರ್ ದ್ವಿಚಕ್ರ ವಾಹನದಲ್ಲಿ ಬಂದಿರುವ ಸರಗಳ್ಳರು ಈ ಕೃತ್ಯವನ್ನು ಎಸಗಿದ್ದಾರೆ ಎನ್ನಲಾಗುತ್ತಿದೆ.
ಘಟನೆ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದ್ದು, ಮಾಹಿತು ತಿಳಿದ ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ಹಾಗೂ ಸಬ್ ಇನ್ಸ್ಪೆಕ್ಟರ್ ಗಜೇಂದ್ರ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..
 
				 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
					 
					 
						 
						 
						 
						